ಮಂಗಳೂರು: ದ.ಕ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಅವರ ತಾಯಿ ಕಸ್ತೂರಿ (63) ಇಂದು ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ದ.ಕ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆಗೆ ಮಾತೃ ವಿಯೋಗ - DK BJP district president Sudarshan Mudubidhire
ದ.ಕ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಅವರ ತಾಯಿ ಇಂದು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
![ದ.ಕ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆಗೆ ಮಾತೃ ವಿಯೋಗ Kasturi](https://etvbharatimages.akamaized.net/etvbharat/prod-images/768-512-11:30:28:1597212028-kn-mng-01-sudarshan-mother-death-script-ka10015-12082020104955-1208f-1597209595-599.jpg)
Kasturi
ಮೂಡುಬಿದಿರೆ ನಿವಾಸಿಯಾಗಿರುವ ಕಸ್ತೂರಿಯವರಿಗೆ ಇಂದು ಬೆಳಗ್ಗೆ ಹೃದಯಾಘಾತವಾಗಿತ್ತು. ತಕ್ಷಣ ಅಲಂಗಾರಿನಲ್ಲಿರುವ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿತ್ತು. ಆದರೆ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿಯೇ ಮೃತಪಟ್ಟಿದ್ದಾರೆ.
ಮೃತರು ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ ಸಹಿತ ನಾಲ್ವರು ಪುತ್ರರು, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.