ಕರ್ನಾಟಕ

karnataka

ETV Bharat / state

ದ.ಕ ಜಿಲ್ಲೆಯಲ್ಲಿ ನಾಳೆಯಿಂದ ಲಾಕ್​ಡೌನ್​​ ಸಡಿಲಿಕೆ: ಏನಿರುತ್ತೆ, ಏನಿರಲ್ಲ? - ನಾಳೆಯಿಂದ ಲಾಕ್​ಡೌನ್​ ಸಡಿಲಿಕೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ ಲಾಕ್​ಡೌನ್​ ನಿಯಮಗಳಲ್ಲಿ ಕೆಲ ನಿಯಮಗಳನ್ನು ಸಡಲಿಕೆಗೊಳಿಸಲಿದ್ದು, ಏನೆಲ್ಲಾ ಸಿಗಲಿವೆ, ಏನಿಲ್ಲ ಎಂಬುದರ ವಿವರ ಇಲ್ಲಿದೆ.

ದ.ಕ. ಜಿಲ್ಲೆಯಲ್ಲಿ ನಾಳೆಯಿಂದ ಲಾಕ್​ಡೌನ್​ ಸಡಿಲಿಕೆ
ದ.ಕ. ಜಿಲ್ಲೆಯಲ್ಲಿ ನಾಳೆಯಿಂದ ಲಾಕ್​ಡೌನ್​ ಸಡಿಲಿಕೆ

By

Published : May 3, 2020, 9:35 PM IST

ಮಂಗಳೂರು: ದ.ಕ ಜಿಲ್ಲೆಯಲ್ಲಿ ನಾಳೆಯಿಂದ ಲಾಕ್​ಡೌನ್ ನಿಯಮಗಳಲ್ಲಿ ಕೆಲವೊಂದು ಸಡಿಲಿಕೆ ಮಾಡಲಾಗಿದೆ. ಆದ್ದರಿಂದ ಬೆಳಗ್ಗೆ 7ರಿಂದ ರಾತ್ರಿ 7ರವರೆಗೆ ಜಿಲ್ಲೆಯಲ್ಲಿ ಏನಿರುತ್ತೆ, ಏನಿರಲ್ಲ ಅನ್ನೋದರ ಬಗ್ಗೆ ದ.ಕ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅಧಿಕೃತ ಆದೇಶ ಹೊರಡಿಸಿದ್ದಾರೆ.

ಆದೇಶ ಪ್ರತಿ

ಜಿಲ್ಲೆಯಾದ್ಯಂತ ಆಟೋ ರಿಕ್ಷಾ, ಕ್ಯಾಬ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಆದರೆ ಚಾಲಕ ಮತ್ತು ಇಬ್ಬರು ಪ್ರಯಾಣಿಕರಿಗೆ ಅವಕಾಶ ನೀಡಲಾಗಿದೆ. ಜೊತೆಗೆ ಖಾಸಗಿ ವಾಹನಗಳಾದ ಬೈಕ್ ಮತ್ತು ಕಾರುಗಳ ಸಂಚಾರಕ್ಕೂ ಅನುಮತಿ ನೀಡಲಾಗಿದೆ. ಕಾರುಗಳಲ್ಲಿಯೂ ಚಾಲಕ ಸೇರಿ ಇಬ್ಬರು ಪ್ರಯಾಣಿಕರು ಮತ್ತು ಬೈಕ್​​ಗಳಲ್ಲಿ ಒಬ್ಬರಷ್ಟೇ ಪ್ರಯಾಣಿಸಲು ಅನುಮತಿ ನೀಡಲಾಗಿದೆ.

ಸ್ಥಳೀಯ ಅಂಗಡಿಗಳು, ವಸತಿ ಸಂಕೀರ್ಣಗಳ ಶಾಪ್, ಸಣ್ಣಪುಟ್ಟ ಶಾಪ್​ಗಳನ್ನು ತೆರೆಯಬಹುದು. ಆದರೆ ಮಾರುಕಟ್ಟೆ ಮತ್ತು ಮಾರುಕಟ್ಟೆ ಸಂಕೀರ್ಣಗಳಲ್ಲಿ ಅಗತ್ಯ ವಸ್ತುಗಳ ಶಾಪ್ ತೆರೆಯಲಷ್ಟೇ ಅನುಮತಿ ನೀಡಲಾಗಿದೆ. ಖಾಸಗಿ ಸಂಸ್ಥೆ ಮತ್ತು ಕಚೇರಿಗಳಲ್ಲಿ 33 ಪ್ರತಿಶತ ಸಿಬ್ಬಂದಿ ಬಳಸಿ ಕೆಲಸಕ್ಕೆ ಅನುಮತಿ ನೀಡಲಾಗಿದೆ. ಅಗತ್ಯ ಸೇವೆಗಳಿಗೆ ಇ-ಕಾಮರ್ಸ್ ಸಂಸ್ಥೆಗಳಿಗೆ ಅವಕಾಶ ಇದೆ. ಅಗತ್ಯ ಕಟ್ಟಡ ಕಾಮಗಾರಿ ನಡೆಸಲು ಅವಕಾಶ ಇದೆ. ಆದರೆ ಹೊರಗಿನಿಂದ ಕಾರ್ಮಿಕರನ್ನು ಕರೆ ತರುವಂತಿಲ್ಲ. ಕೇವಲ ಪರಿಸರದಲ್ಲಿರುವ ಕಾರ್ಮಿಕರನ್ನು ಮಾತ್ರ ಬಳಸಬಹುದು ಎಂದು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್, ಮಾಲ್, ಸಿನಿಮಾ ಮಂದಿರ, ಜಿಮ್, ಕ್ರೀಡಾ ಸಂಕೀರ್ಣ, ಕ್ಲಬ್, ಸ್ವಿಮ್ಮಿಂಗ್ ಪೂಲ್, ಪಾರ್ಕ್, ಸಲೂನ್, ಸ್ಪಾ, ಬ್ಯೂಟಿ ಪಾರ್ಲರ್, ಟೆಕ್ಸ್​ಟೈಲ್ಸ್ ಮತ್ತು ಬಟ್ಟೆ ಅಂಗಡಿಗಳು ತೆರೆಯುವಂತಿಲ್ಲ. ಸಾಮಾಜಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಸೇರಿ ಜನ ಸೇರುವ ಎಲ್ಲಾ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಯವರ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ABOUT THE AUTHOR

...view details