ಬಂಟ್ವಾಳ :ಗೋಮಾಂಸ ಭಕ್ಷಣೆ ಕುರಿತು ಮಾಜಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಅವರ ವೈಯಕ್ತಿಕ. ಅದು ಪಕ್ಷದ್ದಲ್ಲ. ಅದರಿಂದ ಪಕ್ಷಕ್ಕೆ ಯಾವುದೇ ನಷ್ಟವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಬಂಟ್ವಾಳದಲ್ಲಿ ನಡೆಯುತ್ತಿರುವ ಸಂಕಲ್ಪ ಸಮಾವೇಶಕ್ಕೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಗೋಹತ್ಯೆ ನಿಷೇಧ ಮಸೂದೆಗೆ ಸುಗ್ರೀವಾಜ್ಞೆ ಹಿನ್ನೆಲೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಗೋಹತ್ಯೆ ನಿಷೇಧ ಕಾನೂನು ಅಗತ್ಯವಿರಲಿಲ್ಲ.
ರಾಜಕಾರಣ ಉದ್ದೇಶದಿಂದ ಇದನ್ನ ಜಾರಿ ಮಾಡಿದ್ದಾರೆ. ಗೋವನ್ನ ಪೂಜಿಸುವ ಪದ್ಧತಿ ಮೊದಲಿನಿಂದಲೂ ಇದೆ. ಸಿದ್ದರಾಮಯ್ಯ ಅವರ ಅಭ್ಯಾಸದ ಬಗ್ಗೆಯಷ್ಟೇ ಹೇಳಿದ್ದಾರೆ. ಸಿದ್ದರಾಮಯ್ಯ ಹೇಳಿಕೆಯಿಂದ ಪಕ್ಷಕ್ಕೆ ನಷ್ಟವಿಲ್ಲ. ಕಾರ್ಯಕರ್ತರು ಈ ಬಗ್ಗೆ ಅಭಿಪ್ರಾಯ ತಿಳಿಸಿದ್ರೆ ತಪ್ಪೇನಿದೆ ಎಂದರು.