ಮಂಗಳೂರು:ನಗರದಲ್ಲಿ ಸೇವೆ ಸಲ್ಲಿಸುತ್ತಿದ್ದ ಕೇರಳ ಮೂಲದ ಯುವ ವೈದ್ಯೆ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ನಗರದ ದೇರಳಕಟ್ಟೆಯಲ್ಲಿರುವ ಕಣಚೂರು ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದ ಮಹಿಳೆಗೆ ಇತ್ತೀಚೆಗೆ ಕೊರೊನಾ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಉಸಿರಾಟದ ಸಮಸ್ಯೆಯಿಂದ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಬೆಳಗ್ಗೆ ಮೃತಪಟ್ಟಿದ್ದಾರೆ.