ಕರ್ನಾಟಕ

karnataka

ETV Bharat / state

ಹಕ್ಕಿ ಜ್ವರದ ಬಗ್ಗೆ ಆತಂಕ ಬೇಡ, ಜಾಗೃತಿ ಮೂಡಿಸಬೇಕು: ದ.ಕ. ಜಿಲ್ಲಾಧಿಕಾರಿ - ಮಂಗಳೂರು

ಹಕ್ಕಿ ಜ್ವರಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರದೇಶಗಳಲ್ಲಿ ನಿಗಾವಹಿಸಿ, ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Sindhu Roopesh
ದ.ಕ ಜಿಲ್ಲಾಧಿಕಾರಿ

By

Published : Mar 12, 2020, 6:59 PM IST

ಮಂಗಳೂರು: ಹಕ್ಕಿ ಜ್ವರದ ಬಗ್ಗೆ ಆತಂಕ ಬೇಡ, ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಆಗಬೇಕಿದೆ ಎಂದು ದ.ಕ. ಜಿಲ್ಲಾಧಿಕಾರಿ ಬಿ.ಸಿಂಧೂ ರೂಪೇಶ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಹಕ್ಕಿ ಜ್ವರ (ಕೋಳಿಶೀತ ಜ್ವರ) ನಿಯಂತ್ರಿಸಲು ಪ್ರಾಣಿಜನ್ಯ ರೋಗ ತುರ್ತು ನಿರ್ವಹಣಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಹಕ್ಕಿ ಜ್ವರಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಪ್ರದೇಶಗಳಲ್ಲಿ ನಿಗಾವಹಿಸಿ, ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು. ಈ ಕುರಿತು ಜನರಲ್ಲಿ ಹೆಚ್ಚು ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಅಗತ್ಯ ಸಲಕರಣೆಗಳಾದ ಹ್ಯಾಂಡ್ ಸ್ಪ್ರೇ, ಮುಖಗವಸು ಮುಂತಾದ ಅಗತ್ಯ ವಸ್ತುಗಳನ್ನು ಜಿಲ್ಲಾ ವಿಪತ್ತು ವಿಭಾಗದಿಂದ ವಿತರಿಸಲಾಗುತ್ತದೆ ಎಂದು ಅವರು ಹೇಳಿದರು. ಜಿಲ್ಲೆಯಲ್ಲಿ 5 ಚೆಕ್‌ ಪೋಸ್ಟ್​ಗಳಲ್ಲಿ ಹೊರ ರಾಜ್ಯದಿಂದ ಬರುವ ವಾಹನಗಳನ್ನು ಪರಿಶೀಲಿಸಲಾಗುತ್ತಿದೆ. ಜೊತೆಗೆ ಇಲಾಖೆಯಿಂದ ಎಲ್ಲಾ ರೀತಿಯ ಮುನ್ನೆಚರಿಕೆ ಕ್ರಮ ವಹಿಸಲಾಗುತ್ತಿದೆ. ಎಲ್ಲಾ ತಾಲೂಕಿನಿಂದ ರಕ್ತದ ಮಾದರಿಯನ್ನು ಸಂಗ್ರಹಿಸಿ ಬೆಂಗಳೂರಿನ ಪ್ರಯೋಗ ಶಾಲೆಗೆ ಕಳುಹಿಸುತ್ತಿದ್ದೇವೆ. ಇದುವರೆಗೆ ಹಕ್ಕಿ ಜ್ವರಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಕರಣ ದಾಖಲಾಗಿರುವುದಿಲ್ಲ ಎಂದು ಜಿಲ್ಲೆಯ ಪಶು ಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಜಯರಾಜ್ ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ, ಜಿಲ್ಲಾ ಆರ್.ಸಿ.ಎಚ್ ಅಧಿಕಾರಿ ಡಾ. ರಾಜೇಶ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಕಾರ್ಯಕ್ರಮ ಅನುಷ್ಠಾಣಾಧಿಕಾರಿ ಡಾ. ನವೀನ್‍ಚಂದ್ರ ಕುಲಾಲ್ ಉಪಸ್ಥಿತರಿದ್ದರು.

ABOUT THE AUTHOR

...view details