ಕರ್ನಾಟಕ

karnataka

ETV Bharat / state

ಪ್ರಧಾನಿ ಮೋದಿ ಜನ್ಮದಿನದ ಅಂಗವಾಗಿ ಪ್ಲಾಸ್ಮಾ ದಾನ ಮಾಡಿದ ಶಾಸಕ ಡಾ.ವೈ ಭರತ್ ಶೆಟ್ಟಿ - ಡಾ.ವೈ ಭರತ್ ಶೆಟ್ಟಿ

ಪ್ರಧಾನಿ ನರೇಂದ್ರ ಮೋದಿಯ ಜನ್ಮದಿನದ ಅಂಗವಾಗಿ ಶಾಸಕ ಭರತ್​ ಶೆಟ್ಟಿ ಮಂಗಳೂರಿನ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಪ್ಲಾಸ್ಮಾ ದಾನ ಮಾಡಿದ್ದಾರೆ.

Dr.Y.Bharat Shetty
ಪ್ಲಾಸ್ಮಾ ದಾನ ಮಾಡಿದ ಶಾಸಕ ಡಾ.ಭರತ್​​ ಶೆಟ್ಟಿ

By

Published : Sep 17, 2020, 7:00 PM IST

ಮಂಗಳೂರು:ಪ್ರಧಾನಿ ನರೇಂದ್ರ ಮೋದಿಜಿಯವರ 70ನೇ ಜನ್ಮ ದಿನದ ಅಂಗವಾಗಿ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟಿ ಪ್ಲಾಸ್ಮಾ ದಾನ ಮಾಡಿದ್ದಾರೆ.

ಪ್ಲಾಸ್ಮಾ ದಾನ ಮಾಡಿದ ಶಾಸಕ ಡಾ.ಭರತ್​​ ಶೆಟ್ಟಿ

ಕೋವಿಡ್​​ ಬಿಕ್ಕಟ್ಟಿನ ಮಧ್ಯೆ ಪ್ರಧಾನಿ ಮೋದಿಯ ಜನ್ಮದಿನದ ಭಾಗವಾಗಿ ಬಿಜೆಪಿಯು ಸೆಪ್ಟೆಂಬರ್ 14 ರಿಂದ 20 ರ ತನಕ ದೇಶಾದ್ಯಂತ ಸೇವಾ ಸಪ್ತಾಹ ಅಭಿಯಾನ ಆಚರಿಸುತ್ತಿದೆ. ಕೋವಿಡ್ ಸೋಂಕಿನಿಂದ ಗುಣಮುಖರಾದವರು ತಮ್ಮ ಪ್ಲಾಸ್ಮಾ ನೀಡಿದರೆ ಸೋಂಕಿತರು ಶೀಘ್ರ ಗುಣಮುಖರಾಗುತ್ತಾರೆ. ಈ ನಿಟ್ಟಿನಲ್ಲಿ ಶಾಸಕ ಭರತ್​ ಶೆಟ್ಟಿ ಮಂಗಳೂರಿನ ದೇರಳಕಟ್ಟೆಯ ಕೆ.ಎಸ್ ಹೆಗ್ಡೆ ಆಸ್ಪತ್ರೆಯಲ್ಲಿ ಇಂದು ಪ್ಲಾಸ್ಮಾ ದಾನ ಮಾಡಿದ್ದಾರೆ.

ಪ್ಲಾಸ್ಮಾ ದಾನ ಮಾಡುವ ಮುನ್ನ ವ್ಯಕ್ತಿಯನ್ನು ವೈದ್ಯರು ಪರೀಕ್ಷಿಸಬೇಕಿದ್ದು, ಡಾ.ಭರತ್ ಶೆಟ್ಟಿ ಬುಧವಾರ ಈ ಪ್ರಕ್ರಿಯೆಗೆ ಒಳಗಾಗಿದ್ದರು. ಪ್ಲಾಸ್ಮಾ ದಾನ ಮಾಡಲು ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ ಬಳಿಕ ಇಂದು ಪ್ಲಾಸ್ಮಾ ದಾನ ಮಾಡಿದ್ದಾರೆ.

ABOUT THE AUTHOR

...view details