ಕರ್ನಾಟಕ

karnataka

ETV Bharat / state

ಅಡಿಕೆ ಬೆಳೆಗಾರರಿಗೆ ಎಕರೆಗೆ 1 ಲಕ್ಷ ರೂ. ಸಾಲ: ರಾಜೇಂದ್ರ ಕುಮಾರ್ - ಅಡಿಕೆ ಬೆಳೆಗಾರರಿಗೆ ಎಕರೆಗೆ ಲಕ್ಷ ರೂ. ಸಾಲ

ಅಡಿಕೆ ಬೆಳೆಗಾರರಿಗೆ ಕೃಷಿ ಅಭಿವೃದ್ಧಿಗಾಗಿ ಎಕರೆಗೆ 80 ಸಾವಿರದಿಂದ ಒಂದು ಲಕ್ಷ ರೂ.ವರೆಗೂ ಸಾಲ ನೀಡಲಾಗುವುದು ಎಂದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.‌ಎನ್.ರಾಜೇಂದ್ರ ಕುಮಾರ್ ತಿಳಿಸಿದರು.

Dr. Rajendra Kumar said 1 lakh per acre for nut growers. Management Loans
ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭ

By

Published : Oct 27, 2020, 8:09 AM IST

ಅಳದಂಗಡಿ: ಅಡಿಕೆ ಧಾರಣೆ ಹಾಗೂ ರಬ್ಬರ್ ಧಾರಣೆ ಏರುಗತಿಯಲ್ಲಿರುವುದು ಉತ್ತಮ ವಿಚಾರ. ಅಡಿಕೆ ಬೆಳೆಗಾರರಿಗೆ ಕೃಷಿ ಅಭಿವೃದ್ಧಿಗೆ ಎಕರೆಗೆ 80 ಸಾವಿರದಿಂದ ಒಂದು ಲಕ್ಷ ರೂ.ವರೆಗೂ ಸಾಲ ನೀಡಲಾಗುವುದು ಎಂದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.‌ಎನ್.ರಾಜೇಂದ್ರ ಕುಮಾರ್ ತಿಳಿಸಿದರು.

ಅಳದಂಗಡಿ ಗುರುಸಭಾ ಭವನದಲ್ಲಿ ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದ ಸಭಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 10 ಲಕ್ಷ ರೂ.ವರೆಗೆ ಶೇ. 3ರ ಬಡ್ಡಿಯಲ್ಲಿ ಸಾಲ ನೀಡಲಾಗುವುದು. ‌ಅಳದಂಗಡಿಲ್ಲಿ‌ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ನಿರ್ಮಿಸಲು 5 ಲಕ್ಷ ರೂ. ನೀಡುವುದಾಗಿ ಘೋಷಿಸಿದರು.

37 ವರ್ಷಗಳಿಂದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ ಪಿ.ಹೆಚ್.ನಿತ್ಯಾನಂದ ಶೆಟ್ಟಿ ನೊಚ್ಚ ಅವರಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ ನಡೆಯಿತು.‌ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ಗೌರವಿಸಲಾಯಿತು. ಅಳದಂಗಡಿಯ ತಿಮ್ಮಣ್ಣ ಅರಸರಾದ ಡಾ. ಪದ್ಮಪ್ರಸಾದ ಅಜಿಲ, ಶಾಸಕ ಹರೀಶ್ ಪೂಂಜಾ, ವಿಧಾನ ಪರಿಷತ್ ಸದಸ್ಯರುಗಳಾದ ಕೆ.ಹರೀಶ್ ಕುಮಾರ್, ಪ್ರತಾಪ್ ಸಿಂಹ ನಾಯಕ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

For All Latest Updates

ABOUT THE AUTHOR

...view details