ಮಂಗಳೂರು:ಮಳೆಗಾಲಕ್ಕೂ ಮುನ್ನ ಮಹಾನಗರಗಳಲ್ಲಿ ಮಳೆ ನೀರು ಹರಿದು ಹೋಗಲು ಪೂರ್ವ ತಯಾರಿಗಳನ್ನು ಮಾಡಲಾಗುತ್ತದೆ. ಆದರೆ ಈ ಬಾರಿ ಕೋವಿಡ್ ಹಾವಳಿಯಿಂದ ಹಲವೆಡೆ ಈ ತಯಾರಿಗೆ ತಡೆಯಾಗಿದೆ. ಆದರೆ ಮಂಗಳೂರಿನಲ್ಲಿ ಒಂದೂವರೆ ಕೋಟಿ ರೂ. ವೆಚ್ಚದಲ್ಲಿ ಚರಂಡಿಗಳ ದುರಸ್ತಿ ಕಾರ್ಯಗಳು ನಡೆಯುತ್ತಿದೆ.
ಮಳೆಗಾಲದಲ್ಲಿ ಮಳೆ ನೀರು ಸರಾಗವಾಗಿ ಹರಿದು ಹೋಗದಿದ್ದರೆ ನಗರಗಳಲ್ಲಿ ಕೃತಕ ನೆರೆ ಸೃಷ್ಟಿಯಾಗಿ ಜನಸಾಮಾನ್ಯರಿಗೆ ಸಾಕಷ್ಟು ತೊಂದರೆಯಾಗುತ್ತದೆ. ಇದಕ್ಕಾಗಿ ಆಯಾ ಸ್ಥಳೀಯ ಸಂಸ್ಥೆಗಳು ಮಳೆಗಾಲ ಆರಂಭಕ್ಕೆ ಎರಡು ತಿಂಗಳು ಮುನ್ನವೇ ನೀರು ಸರಾಗವಾಗಿ ಹರಿದು ಹೋಗಲು ಪೂರ್ವ ತಯಾರಿಗಳನ್ನು ಮಾಡುತ್ತದೆ.
ಮಂಗಳೂರಿನಲ್ಲಿ ಈ ಬಾರಿ ಒಂದೂವರೆ ಕೋಟಿ ರೂ. ವೆಚ್ಚದಲ್ಲಿ 60 ವಾರ್ಡುಗಳಲ್ಲಿ ರಾಜಕಾಲುವೆ ಒಳಚರಂಡಿಗಳ ದುರಸ್ತಿ ಕಾರ್ಯಗಳನ್ನು ಸಮರೋಪಾದಿಯಲ್ಲಿ ಮಾಡಲಾಗಿದೆ. ಕಾಲುವೆಗಳಲ್ಲಿ ತುಂಬಿರುವ ಹೂಳನ್ನು ತೆಗೆದು ಮಳೆ ನೀರು ಹರಿದು ಹೋಗಲು ಬೇಕಾದ ಕಾಮಗಾರಿ ಈಗಾಗಲೇ ಬಹುತೇಕ ಪೂರ್ಣಗೊಂಡಿದೆ.