ಮಂಗಳೂರು(ದಕ್ಷಿಣ ಕನ್ನಡ): ಅತಿವೇಗವಾಗಿ ಬಸ್ ಚಲಾಯಿಸಿಕೊಂಡು ಮಹಿಳಾ ಟೆಕ್ಕಿಯೊಬ್ಬರಿಗೆ ಡಿಕ್ಕಿ ಹೊಡೆದು,ಅವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಸ್ ಚಾಲಕನನ್ನು ನಿನ್ನೆ ಬಂಧಿಸಿದ್ದಾರೆ.
ಪದವಿನಂಗಡಿ ನಿವಾಸಿ ಶರಣ್ ಕುಮಾರ್(35) ಬಂಧಿತ ಬಸ್ ಚಾಲಕ. ಬೆಂಗಳೂರಿನಲ್ಲಿ ಟೆಕ್ಕಿಯಾಗಿರುವ ಮೇಘಾ ರಂಜಿತ್ ಪೈ(34) ಮಂಗಳೂರಿನಲ್ಲಿ ತಮ್ಮ ತವರು ಮನೆಗೆ ಬಂದಿದ್ದರು. ಡಿಸೆಂಬರ್ 3ರಂದು ನಗರದ ಕೊಟ್ಟಾರ ಚೌಕಿ ಎಂಬಲ್ಲಿ ಕಲ್ಲುರ್ಟಿ ದೈವಸ್ಥಾನದ ಮುಂಭಾಗ ರಸ್ತೆ ದಾಟುತ್ತಿದ್ದ ಸಂದರ್ಭ ದ್ವಿಮುಖ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದ ಗೋಲ್ಡನ್ ಎಂಬ ಸಿಟಿ ಬಸ್ ಡಿಕ್ಕಿ ಹೊಡೆದಿತ್ತು.