ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ನೇತೃತ್ವದಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗಾಗಿ ಜಾರಿಗೊಳಿಸಲಾದ 'ಜ್ಞಾನ ತಾಣ' ಕುರಿತು ಸಚಿವ ಸುರೇಶ್ ಕುಮಾರ್ ಹಾಗೂ ಡಾ.ಡಿ ವೀರೇಂದ್ರ ಹೆಗ್ಗಡೆಯವರು ಚರ್ಚೆ, ಸಮಾಲೋಚನೆ ನಡೆಸಿದರು.
ಧರ್ಮಸ್ಥಳ ಭೇಟಿ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದು ಹೀಗೆ.. - Education Minister Suresh Kumar, Dr D Virendra Hegde
ಸಾಮಾಜಿಕ ಜಾಲತಾಣದಲ್ಲಿ ವಿಸ್ತೃತವಾಗಿ ಬರೆದುಕೊಂಡಿರುವ ಸುರೇಶ್ ಕುಮಾರ್, ತಮ್ಮ ಹುಟ್ಟು ಹಬ್ಬದ ಹಿನ್ನೆಲೆ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದು, ಬಳಿಕ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಜತೆ ಚರ್ಚೆ ನಡೆಸಲಾಯಿತು ಎಂದಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿಸ್ತೃತವಾಗಿ ಬರೆದುಕೊಂಡಿರುವ ಸುರೇಶ್ ಕುಮಾರ್, ತಮ್ಮ ಹುಟ್ಟು ಹಬ್ಬದ ಹಿನ್ನೆಲೆ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದು, ಬಳಿಕ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಜತೆ ಚರ್ಚೆ ನಡೆಸಲಾಯಿತು. ಧರ್ಮಸ್ಥಳ ಕ್ಷೇತ್ರದಿಂದ ಸುಮಾರು ₹ 21 ಕೋಟಿ ರೂ. ವೆಚ್ಚದಲ್ಲಿ ಲ್ಯಾಪ್-ಟ್ಯಾಪ್ ಮತ್ತು ಟ್ಯಾಬ್ಗಳನ್ನು ವಿತರಣೆ ಮಾಡಲಾಗುತ್ತಿರುವುದು ಶ್ಲಾಘನೀಯ ಎಂದಿದ್ದಾರೆ.
ಶಾಲೆಗಳನ್ನು ತೆರೆಯಬೇಕೋ ಅಥವಾ ಬೇಡವೋ ಎಂಬುದರ ಕುರಿತು ಸಮಾಜದಲ್ಲಿ ಚರ್ಚೆ ನಡೆಯುತ್ತಿದೆ. ಆನ್ಲೈನ್ ಶಿಕ್ಷಣದಲ್ಲೂ ಹಲವಾರು ಇತಿಮಿತಿಗಳಿವೆ. ಎಸ್.ಎಸ್.ಎಲ್.ಸಿ ಪರೀಕ್ಷೆ ಸುಸೂತ್ರವಾಗಿ ನಡೆದ ಹಿನ್ನೆಲೆ ಹಾಗೂ ಈ ಬಾರಿ ವಿಶೇಷ ಸನ್ನಿವೇಶದಲ್ಲಿ ಜರುಗಿದ್ದ ಎಸ್ಎಸ್ಎಲ್ಸಿ ಪರೀಕ್ಷೆಗಳು ನಡೆಯುವುದಕ್ಕಿಂತ ಮುನ್ನ ಧರ್ಮಸ್ಥಳಕ್ಕೆ ಆಗಮಿಸಿ ಭಗವಂತನ ಕೃಪೆ, ಆಶೀರ್ವಾದ ಪಡೆದಿದ್ದೆ. ಪರೀಕ್ಷೆ ಮುಗಿದ ತಕ್ಷಣ ಬಂದು ನನ್ನ ಧನ್ಯವಾದಗಳನ್ನು ಸಮರ್ಪಿಸಿದ್ದೆ ಎಂದು ಧರ್ಮಸ್ಥಳ ಭೇಟಿ ಕುರಿತು ತಿಳಿಸಿದ್ದಾರೆ.