ಕರ್ನಾಟಕ

karnataka

ETV Bharat / state

ದ.ಕ ಜಿಲ್ಲೆಯಲ್ಲಿ ಮನೆ ಮನೆ ಪ್ರಚಾರ ಸಂಜೆ ಅಂತ್ಯ: ಬಳಿಕ 144 ಸೆಕ್ಷನ್​ ಜಾರಿ - ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ

ಸಂಜೆ 6 ಗಂಟೆಯಿಂದ ದ‌. ಕ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗುತ್ತದೆ. ಏ. 19 ಸಂಜೆ 6 ಗಂಟೆವರೆಗೆ ಸೆಕ್ಷನ್​ ಜಾರಿಯಲ್ಲಿರಲಿದೆ ಎಂದು ದ.ಕ ಜಿಲ್ಲಾ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.

ಸೆಕ್ಷನ್ ಜಾರಿ

By

Published : Apr 17, 2019, 11:38 AM IST

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಏ. 18 ರಂದು ಚುನಾವಣೆ ನಡೆಯಲಿದ್ದು, ಇಂದು ಸಂಜೆ 6 ಗಂಟೆ ನಂತರ ಮನೆ ಮನೆ ಪ್ರಚಾರ ಮಾಡುವಂತಿಲ್ಲ ಎಂದು ದ.ಕ ಜಿಲ್ಲಾ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.

ದ.ಕ ಜಿಲ್ಲಾ ಚುನಾವಣಾಧಿಕಾರಿ ಸಸಿಕಾಂತ್ ಸೆಂಥಿಲ್

ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸಂಜೆ 6 ಗಂಟೆಯಿಂದ ದ‌.ಕ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗುತ್ತದೆ. ಏ. 19 ಸಂಜೆ 6 ಗಂಟೆವರೆಗೆ ಸೆಕ್ಷನ್ ಜಾರಿಯಲ್ಲಿರಲಿದೆ ಎಂದರು.

ದ.ಕ ಜಿಲ್ಲೆಯಲ್ಲಿ 1724460 ಮತದಾರರಿದ್ದು, ಇದರಲ್ಲಿ 845308 ಪುರುಷರು, 879050 ಮಹಿಳೆಯರು, 102 ಇತರರು ಇದ್ದಾರೆ. ಜಿಲ್ಲೆಯಲ್ಲಿ ಒಟ್ಟು 1861 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ ಎಂದರು.

ABOUT THE AUTHOR

...view details