ಮಂಗಳೂರು:ಮಹಾನಗರ ಪಾಲಿಕೆ ವ್ಯಾಪ್ತಿಯ 60 ವಾರ್ಡ್ಗಳಿಗೆ ನವೆಂಬರ್ 12ರಂದು ರಾಜ್ಯ ಚುನಾವಣಾ ಆಯೋಗ ಚುನಾವಣೆ ಘೋಷಿಸಿದೆ.
ಮಂಗಳೂರು ಪಾಲಿಕೆ ವ್ಯಾಪ್ತಿಯ 60 ವಾರ್ಡ್ಗಳಿಗೆ ನವೆಂಬರ್ 12ರಂದು ಚುನಾವಣೆ ಬೆಳಗ್ಗೆ 7ರಿಂದ ಸಂಜೆ 5ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು, ಅಕ್ಟೋಬರ್ 31 ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ನವೆಂಬರ್ 2ರಂದು ನಾಮಪತ್ರ ಪರಿಶೀಲನೆ ಕಾರ್ಯ ನಡೆಯಲಿದೆ. ನಂತರ ನವೆಂಬರ್ 4 ನಾಮಪತ್ರ ಹಿಂದೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಚುನಾವಣೆಯಲ್ಲಿ ಸ್ಪರ್ಧಿಸುವ ಅಭ್ಯರ್ಥಿಗಳು ಗರಿಷ್ಠ 3 ಲಕ್ಷ ರೂ.ವರೆಗೆ ವೆಚ್ಚ ಮಾಡಬಹುದು.
ಚುನಾವಣಾ ನೀತಿ ಸಂಹಿತೆ ನಿನ್ನೆಯಿಂದಲೇ ಜಾರಿಯಾಗಿದ್ದು, ನವೆಂಬರ್ 14ರವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿಯಲ್ಲಿರುತ್ತದೆ. ನಗರದ ಎಲ್ಲಾ ವಾರ್ಡ್ಗಳಲ್ಲಿ ರಾಜಕೀಯ ಪಕ್ಷಗಳ, ಮುಖಂಡರ ಭಾವಚಿತ್ರ ಹಾಕಿರುವ ಫ್ಲೆಕ್ಸ್ , ಬ್ಯಾನರ್, ಕಟೌಟ್, ಹೋರ್ಡಿಂಗ್ಸ್ಗಳನ್ನು ತಕ್ಷಣದಿಂದಲೇ ತೆರವುಗೊಳಿಸಬೇಕೆಂದು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಆದೇಶಿಸಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಅವಧಿ ಮಾರ್ಚ್ನಲ್ಲೇ ಮುಕ್ತಾಯವಾಗಿದ್ದು, ವಾರ್ಡ್ನಲ್ಲಿ ಮೀಸಲಾತಿಗೆ ಸಂಬಂಧಪಟ್ಟ ವಿಚಾರ ಕೋರ್ಟ್ ಮೆಟ್ಟಿಲೇರಿದ ಕಾರಣ ಚುನಾವಣೆ ವಿಳಂಬವಾಗಿದೆ.