ಕರ್ನಾಟಕ

karnataka

ETV Bharat / state

ವಿದ್ಯುತ್ ಶಾರ್ಟ್ ಸರ್ಕ್ಯೂಟ್: ಬಂಟ್ವಾಳದಲ್ಲಿ ಬೇಕರಿ ಬೆಂಕಿಗಾಹುತಿ

ವಿದ್ಯುತ್ ಶಾರ್ಟ್ ಸರ್ಕ್ಯೂಟ್​​ನಿಂದ ಬೇಕರಿಯೊಂದು ಬೆಂಕಿಗಾಹುತಿಯಾದ ಘಟನೆ ಬಂಟ್ವಾಳ ತಾಲೂಕಿನ ಪಾಣೆ ಮಂಗಳೂರಲ್ಲಿ ನಡೆದಿದೆ.

Electric short cercuit
Electric short cercuit

By

Published : Aug 14, 2020, 3:58 PM IST

ಬಂಟ್ವಾಳ:ತಾಲೂಕಿನ ಪಾಣೆಮಂಗಳೂರು ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್​​​ನಿಂದಾಗಿ ಬೇಕರಿಯೊಂದು ಬೆಂಕಿಗಾಹುತಿಯಾದ ಘಟನೆ ನಡೆದಿದೆ.

ಪಾಣೆ ಮಂಗಳೂರು ಕಲ್ಲುರ್ಟಿ ದೇವಸ್ಥಾನದ ಸಮೀಪದಲ್ಲಿರುವ ವಾಣಿಜ್ಯ ಸಂಕೀರ್ಣವೊಂದರಲ್ಲಿರುವ ವಿಷ್ಣು ಬೇಕರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್​​ನಿಂದ ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಸುಮಾರು 10 ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ ಎನ್ನಲಾಗುತ್ತಿದೆ.

ಇತ್ತೀಚೆಗಷ್ಟೇ ಅಂಗಡಿಯ ನವೀಕರಣ ಕೆಲಸಗಳನ್ನು ಮಾಡಲಾಗಿತ್ತು. ಮಧ್ಯರಾತ್ರಿ ಸಮಯದಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ABOUT THE AUTHOR

...view details