ಪುತ್ತೂರು(ದಕ್ಷಿಣ ಕನ್ನಡ):ಮಿಂಚಿನ ಕಾರ್ಯಾಚರಣೆ ನಡೆಸಿದ ಪುತ್ತೂರು ವಲಯ ಅರಣ್ಯ ಇಲಾಖೆ ಸಿಬ್ಬಂದಿ 6 ಮಂದಿ ಕುಖ್ಯಾತ ಅಂತಾರಾಜ್ಯ ದಂತಚೋರರನ್ನು ಬಂಧಿಸಿದ್ದಾರೆ. ಇಲ್ಲಿನ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚೋರರ ವಾಹನ ಅಡ್ಡಗಟ್ಟಿ ಆನೆ ದಂತ ಮತ್ತು ವಾಹನ ವಶಪಡಿಸಿಕೊಳ್ಳಲಾಗಿದೆ.
ಶಶಿಕುಮಾರ್, ಸತೀಶ್, ವಿಜ್ಞೇಶ್, ವಿನಿತ್, ಸಂಪತ್ ಕುಮಾರ ಮತ್ತು ರತೀಶ್ ಎಂಬವರು ಬಂಧಿತ ಆರೋಪಿಗಳು. ಇವರೆಲ್ಲ ತಮಿಳುನಾಡು ಮತ್ತು ಕೇರಳ ಮೂಲದವರಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ.