ಮಂಗಳೂರು:ಮೀನುಗಾರಿಕೆ ಉದ್ಯಮದಲ್ಲಿ ತೊಡಗಿಸಿಕೊಳ್ಳುವ ಸಣ್ಣ ಉದ್ದಿಮೆದಾರರಿಗೆ ಮೀನು ಹಾಗೂ ಮೀನಿನ ಮೌಲ್ಯವರ್ಧಿತ ಉತ್ಪನ್ನಗಳ ಉತ್ಪಾದನೆ ಮಾರಾಟಕ್ಕೆ ಅವಶ್ಯ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಮೀನಿನ ಚಿಪ್ಸ್ ಮತ್ತು ಮೀನಿನ ಮಸಾಲೆ ಪದಾರ್ಥಗಳನ್ನು ಈಗಾಗಲೇ ಬಿಡುಗಡೆಗೊಳಿಸಿದ್ದು, ಮೀನಿನ ಉತ್ಪನ್ನ ಪೂರೈಕೆ ಹಾಗೂ ವಿತರಣೆಗೆ ಹೆಚ್ಚು ಒತ್ತು ನೀಡಬೇಕು ಎಂದು ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಕೋರ್ಟ್ ಹಾಲ್ನಲ್ಲಿ ನಡೆದ ಮೀನಿನ ಉತ್ಪಾದನೆಯ ವಿತರಕರ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಮೀನಿನ ಚಿಪ್ಸ್ ಉತ್ಪಾದನೆಯನ್ನು ವ್ಯಾಪಕವಾಗಿ ವಿಸ್ತರಿಸುವ ನಿಟ್ಟಿನಲ್ಲಿ ವಿತರಕರ ಪಾತ್ರ ತುಂಬಾ ಮುಖ್ಯವಾಗಿರುತ್ತದೆ. ಹಾಗಾಗಿ ಪರಿಣತಿಯುಳ್ಳ ಷರತ್ತು ಮತ್ತು ನಿಬಂಧನೆಗಳನ್ನು ಪಾಲಿಸುವಂತಹ ಅರ್ಹ ವ್ಯಕ್ತಿಯನ್ನು ವಿತರಕರನ್ನಾಗಿ ನೇಮಿಸಿಕೊಳ್ಳಬೇಕು ಎಂದು ಮೀನುಗಾರಿಕಾ ಸಹಕಾರಿ ಮಹಾಮಂಡಳಿಗೆ ಅವರು ಸೂಚಿಸಿದರು.