ಮಂಗಳೂರು: ರಸ್ತೆ ಅಪಘಾತದಲ್ಲಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿ 66ರ ಕೊಟ್ಟಾರಚೌಕಿ ಬಳಿ ನಡೆದಿದೆ.
ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿ ಅಪಘಾತದಲ್ಲಿ ಸಾವು - Mangalore West Traffic Police Station
ರಸ್ತೆ ಅಪಘಾತದಲ್ಲಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು ರಾಷ್ಟ್ರೀಯ ಹೆದ್ದಾರಿ 66ರ ಕೊಟ್ಟಾರಚೌಕಿ ಬಳಿ ನಡೆದಿದೆ.
ಮಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿ ಅಪಘಾತದಲ್ಲಿ ಸಾವು
ನಗರದ ಸುರತ್ಕಲ್, ಹೊಸಬೆಟ್ಟು ಸಮೀಪದ ಮಾರುತಿ ನಗರ ನಿವಾಸಿ ವಿಶಾಖ್ ಐತಾಳ್ (20) ಮೃತ ವಿದ್ಯಾರ್ಥಿ. ಈತ ಕೆಪಿಟಿ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಮೈ ಮೇಲೆ ಬಿದ್ದಿದೆ.
ಪರಿಣಾಮ ಗಂಭೀರ ಗಾಯಗೊಂಡ ವಿಶಾಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಈ ಕುರಿತು ಮಂಗಳೂರು ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.