ಮಂಗಳೂರು:ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಇಂದು ಬಂಟ್ವಾಳದ ಸಿದ್ದಕಟ್ಟೆಯಲ್ಲಿ ವಶಕ್ಕೆ ಪಡೆದಿದ್ದಾರೆ.
ಆರೋಪಿ ಪ್ರತಿರೋಧದಿಂದ ಪೊಲೀಸ್ ಸಿಬ್ಬಂದಿ ಕಾಲು ಮುರಿತ - Bantvala police arrested criminal
ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಇಂದು ಬಂಟ್ವಾಳದ ಸಿದ್ದಕಟ್ಟೆಯಲ್ಲಿ ವಶಪಡಿಸಿಕೊಂಡಿದ್ದಾರೆ. ಈ ಸಂದರ್ಭ ಆರೋಪಿ ತೋರಿದ ಪ್ರತಿರೋಧದಿಂದಾಗಿ ಪೊಲೀಸ್ ಸಿಬ್ಬಂದಿ ಮಹೇಂದ್ರರವರ ಎಡ ಕಾಲಿನ ಮೂಳೆ ಮುರಿತವಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ತಲೆಮರೆಸಿಕೊಂಡಿದ್ದ ಆರೋಪಿ ಬಂಧನ: ಆರೋಪಿ ಪ್ರತಿರೊಧದಿಂದಾಗಿ ಮುರಿಯಿತು ಪೊಲೀಸ್ ಸಿಬ್ಬಂದಿ ಕಾಲು
ಬಂಟ್ವಾಳ ತಾಲೂಕಿನ ರಾಮಲ ಕಟ್ಟೆಯ ನವಾಜ್ (42) ಬಂಧಿತ ಆರೋಪಿ. ಈತ ಪ್ರಕರಣವೊಂದರಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಇಂದು ಬಂಟ್ವಾಳ ಸಿದ್ದಕಟ್ಟೆ ಕೆರೆ ಬಳಿ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸ್ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಈ ಸಂದರ್ಭ ಆರೋಪಿ ತೋರಿದ ಪ್ರತಿರೊಧದಿಂದಾಗಿ ಪೊಲೀಸ್ ಸಿಬ್ಬಂದಿ ಮಹೇಂದ್ರರವರ ಎಡ ಕಾಲಿನ ಮೂಳೆ ಮುರಿತವಾಗಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.