ಕರ್ನಾಟಕ

karnataka

ETV Bharat / state

ಪರಾರಿಯಾಗಿದ್ದ ಕೋವಿಡ್ ಸೋಂಕಿತ ಪೊಲೀಸರಿಂದ ಪತ್ತೆ - escaped covid infected person found

ಕೋವಿಡ್-19 ಸೋಂಕಿನ ಶಂಕೆಯ ಹಿನ್ನೆಲೆಯಲ್ಲಿ ಜುಲೈ 1 ರಂದು ದೇವರಾಜ್ ಸ್ವತಃ ವೆನ್ಲಾಕ್ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಗಾಗಿದ್ದ. ರವಿವಾರ ವರದಿ ಬಂದಿದ್ದು, ಈ ಹಿನ್ನೆಲೆಯಲ್ಲಿ ನಿನ್ನೆ ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು..

mangalore
ಮಂಗಳೂರು

By

Published : Jul 6, 2020, 8:16 PM IST

ಮಂಗಳೂರು:ನಗರದ ವೆನ್ಲಾಕ್ ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೋವಿಡ್ ಸೋಂಕಿತ ಪುತ್ತೂರಿನ ದರ್ಬೆ ನಿವಾಸಿ ದೇವರಾಜ್ ಎಂಬುವನನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ.

ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಟ್ವೀಟ್

ಈ ಬಗ್ಗೆ ನಗರ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಟ್ವೀಟ್ ಮಾಡಿ, ಕಾನ್‌ಸ್ಟೇಬಲ್‌ಗಳಾದ ಶಂಕರಪ್ಪ ಲಮಾಣಿ ಮತ್ತು ಶಂಕರಪ್ಪ ನಂದಿಯಾಳ್ ಅವರು ಪರಾರಿಯಾಗಿರುವ ಕೋವಿಡ್ ಸೋಂಕಿತನನ್ನು ಪತ್ತೆ ಹಚ್ಚಿದ್ದಾರೆ. ಈ ಮೂಲಕ ಸೋಂಕು ಮತ್ತಷ್ಟು ಹರಡುವುದನ್ನು ತಪ್ಪಿಸಿದಂತಾಗಿದೆ ಎಂದಿದ್ದಾರೆ.

ಕೋವಿಡ್ ಸೋಂಕಿನ ಶಂಕೆಯ ಹಿನ್ನೆಲೆಯಲ್ಲಿ ಜುಲೈ 1 ರಂದು ದೇವರಾಜ್ ಸ್ವತಃ ವೆನ್ಲಾಕ್ ಆಸ್ಪತ್ರೆಗೆ ತೆರಳಿ ತಪಾಸಣೆಗೆ ಒಳಗಾಗಿದ್ದ. ರವಿವಾರ ವರದಿ ಬಂದಿದ್ದು, ಈ ಹಿನ್ನೆಲೆಯಲ್ಲಿ ನಿನ್ನೆ ಬೆಳಗ್ಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಸಂಜೆ ವೇಳೆಗೆ ಆತ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ABOUT THE AUTHOR

...view details