ಬೆಳ್ತಂಗಡಿ: ಗ್ರಾಮ ಪಂಚಾಯತ್ ಗಡಿ ಗೊಂದಲ ಎಂಬ ತ್ಯಾಜ್ಯ ಕುರಿತಾಗಿ ಈಟಿವಿ ಭಾರತ್ನ ವರದಿಗೆ ಸ್ಪಂದಿಸಿರುವ ಮುಂಡಾಜೆ ಗ್ರಾಮ ಪಂಚಾಯತ್ ವಿಲೇವಾರಿ ಮಾಡಿ ಸ್ವಚ್ಛಗೊಳಿಸಿದ್ದಾರೆ.
ತಾಲೂಕಿನ ಮುಂಡಾಜೆ ಹಾಗೂ ಚಾರ್ಮಾಡಿ ಗ್ರಾಮ ಪಂಚಾಯತ್ಗಳ ಗಡಿ ಗೊಂದಲದಿಂದ, ನದಿಯಲ್ಲಿ ಹಾಗೂ ರಸ್ತೆ ಬದಿಯಲ್ಲಿ ಬಿಸಾಡಿರುವ ತ್ಯಾಜ್ಯ ಕೊಳೆತು ಮಾರಕ ಸಾಂಕ್ರಾಮಿಕ ರೋಗ ಹರಡಲು ಕಾರಣವಾಗುತ್ತಿದೆ ಎಂಬ ವಿಸ್ತೃತ ವರದಿಯನ್ನು ಎರಡು ದಿನಗಳ ಹಿಂದೆ ಈಟಿವಿ ಭಾರತ್ ಪ್ರಕಟಿಸಿತ್ತು. ಈ ಬಗ್ಗೆ ತಕ್ಷಣ ಕಾರ್ಯಪ್ರವೃತ್ತರಾದ ಮುಂಡಾಜೆ ಗ್ರಾಮ ಪಂಚಾಯತ್ ಸಿಬ್ಬಂದಿ ದುರ್ವಾಸನೆ ಬೀರುತ್ತಿದ್ದ ತ್ಯಾಜ್ಯವನ್ನು ವಿಲೇವಾರಿ ಮಾಡಿ ಸ್ವಚ್ಛಗೊಳಿಸಿದ್ದಾರೆ.