ಮಂಗಳೂರು :ಕೊರೊನಾ ವಿರುದ್ಧ ನಿರಂತರ ಹೋರಾಟ ನಡೆಸುತ್ತ, ಜನಸಾಮಾನ್ಯರಿಗೆ ಜಾಗೃತಿ ಮೂಡಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಾಜಿ ಸಚಿವ ಬಿ. ರಮಾನಾಥ ರೈ ಗೌರವ ವಂದನೆ ಸಲ್ಲಿಸಿದರು.
ಆಶಾ ಕಾರ್ಯಕರ್ತೆಯರಿಗೆ ಗೌರವ ಸಲ್ಲಿಸಿದ ಮಾಜಿ ಸಚಿವ ರಮಾನಾಥ ರೈ..! - mangalore corona NEWS
ಬಂಟ್ವಾಳದ ಸಜೀಪಮುನ್ನೂರು, ಮಾಣಿ, ಗೋಳ್ತಮಜಲು, ಕೊಳ್ನಾಡು ಜಿ.ಪಂ ಕ್ಷೇತ್ರಗಳ ಆಶಾ ಕಾರ್ಯಕರ್ತೆಯರಿಗೆ ದಿನ ಬಳಕೆ ಸಾಮಗ್ರಿಗಳನ್ನು ನೀಡುವ ಮೂಲಕ ಮಾಜಿ ಸಚಿವ ರಮಾನಾಥ ರೈ ಗೌರವಿಸಿದರು.

ಮಾಜಿ ಸಚಿವ ಬಿ. ರಮಾನಾಥ ರೈ ಗೌರವ ವಂದನೆ
ಬಂಟ್ವಾಳದ ಸಜೀಪಮುನ್ನೂರು, ಮಾಣಿ, ಗೋಳ್ತಮಜಲು, ಕೊಳ್ನಾಡು ಜಿ.ಪಂ ಕ್ಷೇತ್ರಗಳ ಆಶಾ ಕಾರ್ಯಕರ್ತೆಯರಿಗೆ ದಿನ ಬಳಕೆ ಸಾಮಗ್ರಿಗಳ ಕಿಟ್ ವಿತರಿಸುವ ಮೂಲಕ ಗೌರವಿಸಿದರು.
ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ. ಎಸ್. ಮೊಹಮ್ಮದ್, ಮಂಜುಳಾ ಮಾಧವ ಮಾವೆ, ತಾಲೂಕು ಪಂಚಾಯತ್ ಉಪಾಧ್ಯಕ್ಷ ಅಬ್ಬಾಸ್ ಅಲಿ ಸೇರಿದಂತೆ ಇತರರು ಉಪಸ್ಥಿತರಿದ್ದರು.