ಮಂಗಳೂರು:ಬಿಟ್ ಕಾಯಿನ್ ಹಗರಣದ(Bitcoin scam) ಬಗ್ಗೆ ಪ್ರಧಾನಮಂತ್ರಿಗೆ ಪತ್ರ ಬರೆದಿರುವ ಸಚಿನ್ ಮಾಮನಿ(Sachin Mamani) ಆರೋಪದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಹೆಸರು ಕೂಡ ಇದೆ ಎಂದು ಮಾಜಿ ಸಚಿವ ರಮಾನಾಥ ರೈ ತಿಳಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಈ ಪ್ರಕರಣದ ಬಗ್ಗೆ ಹಾಲಿ ನ್ಯಾಯಾಧೀಶರಿಂದ ತನಿಖೆ ನಡೆಯಲಿ ಎಂದು ಆಗ್ರಹಿಸಿದ್ದಾರೆ. ಹೆಸರನ್ನು ಉಲ್ಲೇಖಿಸದೆ ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಮತ್ತು ಪ್ರಸಿದ್ಧ ಶೆಟ್ಟಿ ಮೊದಲಾದವರ ಹೆಸರನ್ನು ಸಹ ಸಚಿನ್ ಮಾಮನಿ ಅವರು ಪ್ರಧಾನಮಂತ್ರಿಗೆ ಬರೆದಿರುವ ಆರೋಪ ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎಂದರು.
ಮಾಜಿ ಸಚಿವ ರಮಾನಾಥ್ ರೈ ಸುದ್ದಿಗೋಷ್ಟಿ ಈ ಪ್ರಕರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ಮಾತನಾಡುತ್ತಿಲ್ಲ. ಬಿಜೆಪಿಯು ಭ್ರಷ್ಟಾಚಾರ ವಿರೋಧಿ ಎನ್ನುವುದು ಸಂಪೂರ್ಣ ಸುಳ್ಳು. ಶೇ.40 ರಷ್ಟು ಕಮಿಷನ್ ಕೊಡಬೇಕೆಂದು ಗುತ್ತಿಗೆದಾರರ ಸಂಘವೇ ಆರೋಪಿಸಿದೆ. ಬಿಟ್ ಕಾಯಿನ್ ಪ್ರಕರಣದ ಆರೋಪಿ ಸರ್ಕಾರದ ವೆಬ್ಸೈಟ್ ಹ್ಯಾಕ್ ಮಾಡಿ ಸಾರ್ವಜನಿಕರ ಹಣವನ್ನು ಲೂಟಿ ಮಾಡಿದ ಬಗ್ಗೆ ಆರೋಪವಿದೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ಇಂತಹ ಆರೋಪ ಬಂದಾಗ ತನಿಖೆಗೆ ನೀಡುತ್ತಿತ್ತು. ನಮ್ಮ ಬೇಡಿಕೆಯಂತೆ ಹಾಲಿ ನ್ಯಾಯಾಧೀಶರಿಂದ ತನಿಖೆಯನ್ನು ಮಾಡಬೇಕು ಎಂದು ಒತ್ತಾಯಿಸಿದರು.
ಇದನ್ನೂ ಓದಿ:ರಮೇಶ್ ಜಾರಕಿಹೊಳಿ ಮಾತುಕತೆ ಬಳಿಕ ರಾಜು ಕಾಗೆ ಮನೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ: ಹೆಚ್ಚಿದ ಕುತೂಹಲ