ಕರ್ನಾಟಕ

karnataka

ETV Bharat / state

ವರುಣನ ಆರ್ಭಟ: ದಕ್ಷಿಣ ಕನ್ನಡ, ಮೈಸೂರಿನಲ್ಲಿ ಶಾಲಾ ಕಾಲೇಜುಗಳಿಗೆ ಮತ್ತೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆ (ಆ.10) ಶಾಲಾ-ಕಾಲೇಜುಗಳಿಗೆ ದ.ಕ ಜಿಲ್ಲಾಧಿಕಾರಿ ರಜೆ ಘೋಷಿಸಿದ್ದು, ಅದೇ ರೀತಿ ಮೈಸೂರಿನಲ್ಲಿಯೂ ವರುಣನ ಆರ್ಭಟ ಹೆಚ್ಚಿರುವುದರಿಂದ ಜಿಲ್ಲೆಯ ಎಲ್ಲಾ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ.

ಮೈಸೂರಿನಲ್ಲಿ ಶಾಲಾ ಕಾಲೇಜುಗಳಿಗೆ ಮತ್ತೆ ರಜೆ ಮುಂದೂಡಿದ ಜಿಲ್ಲಾಧಿಕಾರಿ

By

Published : Aug 9, 2019, 11:33 PM IST

ದಕ್ಷಿಣ ಕನ್ನಡ/ ಮೈಸೂರು: ಆ. 6 ರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ (ಆ.10) ಕೂಡ ರಜೆ ಘೋಷಣೆಯಾಗಿದೆ. ಹಾಗೆಯೇ ಮೈಸೂರಿನಲ್ಲಿಯೂ ವರುಣನ ಆರ್ಭಟ ಅಧಿಕವಾಗಿರುವುದರಿಂದ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡದಲ್ಲಿ ಶಾಲಾ ಕಾಲೇಜುಗಳಿಗೆ ರಜೆ

ಅದರಂತೆಯೇ ಕಳೆದ ೩ ದಿನಗಳಿಂದ ಮೈಸೂರು ಜಿಲ್ಲೆಯ ಹುಣಸೂರು, ಪಿರಿಯಾಪಟ್ಟಣ, ಹೆಚ್.ಡಿ.ಕೋಟೆ ತಾಲೂಕುಗಳಲ್ಲಿ ಸುರಿಯುತ್ತಿದ್ದ ಭಾರಿ ಮಳೆಯ ಹಿನ್ನೆಲೆಯಲ್ಲಿ ಕಳೆದ ಎರಡು ದಿನಗಳಿಂದ ಈ ಮೂರು ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡದಲ್ಲಿ ತುರ್ತು ಕ್ರಮ;

ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ಯಾವುದೇ ಅನಾಹುತಗಳಿಗೆ ಅವಕಾಶ ನೀಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ತುರ್ತು ಕ್ರಮ ಕೈಗೊಂಡಿರುವುದಾಗಿ ಆದೇಶದಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಅಲ್ಲದೇ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

ಮೀನುಗಾರರಿಗೆ ಮುಂದಿನ ಮೂರು ದಿನಗಳವರೆಗೆ ಕಡ್ಡಾಯವಾಗಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಲಾಗಿದೆ. ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರಬೇಕು ಎಂದು ತಾಕೀತು ಮಾಡಿದ್ದಾರೆ.

ABOUT THE AUTHOR

...view details