ಕರ್ನಾಟಕ

karnataka

ETV Bharat / state

ಆರ್​ಎಸ್ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ: ಪೊಲೀಸರಿಗೆ ದೂರು

ಡಾ ಕಲ್ಲಡ್ಕ ಪ್ರಭಾಕರ್ ಭಟ್​ ಹೆಸರಲ್ಲಿ ನಕಲಿ ಫೇಸ್​ಬುಕ್ ಖಾತೆ ತೆರೆದು ಆಕ್ಷೇಪಾರ್ಹ ಬರಹಗಳನ್ನು ಬರೆದು ಸಮಾಜದಲ್ಲಿ ಅಶಾಂತಿ ಹಬ್ಬಲು ಪ್ರಯತ್ನಿಸಿದವರ ಮೇಲೆ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ಸಲ್ಲಿಸಲಾಗಿದೆ.

ಡಾ ಕಲ್ಲಡ್ಕ ಪ್ರಭಾಕರ ಭಟ್
ಡಾ ಕಲ್ಲಡ್ಕ ಪ್ರಭಾಕರ ಭಟ್

By

Published : Aug 1, 2023, 9:27 PM IST

ಬಂಟ್ವಾಳ (ದಕ್ಷಿಣ ಕನ್ನಡ): ಆರ್​ಎಸ್ಎಸ್ ಪ್ರಮುಖ ಕಲ್ಲಡ್ಕ ಡಾ ಪ್ರಭಾಕರ್ ಭಟ್ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ ತೆರೆದು ಆಕ್ಷೇಪಾರ್ಹ ಬರಹಗಳನ್ನು ಬರೆದು ಸಮಾಜದಲ್ಲಿ ಅಶಾಂತಿ ಹಬ್ಬಲು ಕೆಲವು ಕಿಡಿಗೇಡಿಗಳು ಪ್ರಯತ್ನಿಸುತ್ತಿದ್ದು, ಇವರನ್ನು ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಮಂಗಳೂರು ಸೈಬರ್ ಕ್ರೈಮ್ ಪೊಲೀಸ್​ ಠಾಣೆಯಲ್ಲಿ ದೂರು ನೀಡಲಾಗಿದೆ.

ಆರ್​ಎಸ್ಎಸ್​ ಪ್ರಮುಖರಾಗಿರುವ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಸಂಸ್ಥಾಪಕ, ಪುತ್ತೂರು ವಿವೇಕಾನಂದ ವಿದ್ಯಾವರ್ದಕ ಸಂಘದ ಅಧ್ಯಕ್ಷರಾಗಿರುವ ಪ್ರಭಾಕರ್ ಭಟ್ ಅವರ ಹೆಸರಿನಲ್ಲಿ ನಕಲಿ ಫೇಸ್​ಬುಕ್​ ಖಾತೆಯನ್ನು ತೆರೆಯಲಾಗಿದ್ದು, ಡಾ. ಭಟ್ ಅವರ ಫೇಸ್​ಬುಕ್ ಖಾತೆಯಾಗಲಿ, ಅಥವಾ ಇನ್ನಿತರ ಯಾವುದೇ ಸಾಮಾಜಿಕ ಜಾಲತಾಣದಲ್ಲಿ ಖಾತೆಯನ್ನು ಹೊಂದಿರುವುದಿಲ್ಲ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಈ ಖಾತೆಯ ಮೂಲಕ ಸಮಾಜದಲ್ಲಿ ಅಶಾಂತಿ ಹಬ್ಬಿಸುವ ಪ್ರಯತ್ನ ಮತ್ತು ಹೆಸರನ್ನು ಕೆಡಿಸುವ ಕೆಲಸ ಮಾಡಲಾಗುತ್ತಿದ್ದು, ಈ ಬಗ್ಗೆ ಪೊಲೀಸರು ಸೂಕ್ತವಾದ ತನಿಖೆ ನಡೆಸುವಂತೆ ಮತ್ತು ಅವರ ಮೇಲೆ ಕಾನೂನು ಕ್ರಮವನ್ನು ಕೈಗೊಂಡು ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಪುನರಾವರ್ತನೆ ಆಗದಂತೆ ಪೊಲೀಸರು ನಿಗಾ ವಹಿಸುವಂತೆಯೂ ಅವರು ತಿಳಿಸಿದ್ದಾರೆ.

ಪೊಲೀಸರಿಗೆ ದೂರು

ಮಂಗಳೂರು ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ :ಇನ್ನೊಂದೆಡೆ ನಗರ ಪೊಲೀಸ್ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್​ಬುಕ್ ಖಾತೆ ತೆರೆದಿರುವ ಕಿಡಿಗೇಡಿಗಳು, ಅದರಿಂದ (ಏಪ್ರಿಲ್ 26-2021) ಫ್ರೆಂಡ್ ರಿಕ್ವೆಸ್ಟ್ ಕಳಿಸುತ್ತಿದ್ದರು. ಈ ಕುರಿತು ಎಚ್ಚರದಿಂದ ಇರುವಂತೆ ಸ್ವತಃ ಪೊಲೀಸ್ ಆಯುಕ್ತ ಶಶಿಕುಮಾರ್ ತಮ್ಮ ಅಧಿಕೃತ ಫೇಸ್​ಬುಕ್ ಖಾತೆ ಮೂಲಕ ಮನವಿ ಮಾಡಿದ್ದರು.

ನಾವು ನಮ್ಮ ಅಧಿಕೃತ ಫೇಸ್​ಬುಕ್​ ಖಾತೆಗೆ ಅಪ್ಲೋಡ್ ಮಾಡಿರುವ ಫೋಟೋ ಮತ್ತು ವಿವರಗಳನ್ನು ಬಳಸಿಕೊಂಡು ನಕಲಿ ಖಾತೆ ತೆರೆಯಲಾಗಿತ್ತು. ಅದರಿಂದ ಹಲವು ಜನರಿಗೆ ಫ್ರೆಂಡ್ ರಿಕ್ವೆಸ್ಟ್ ಕೂಡ ಹೋಗಿದೆ. ಆದ್ದರಿಂದ ಎಲ್ಲರೂ ಈ ಬಗ್ಗೆ ಎಚ್ಚರದಿಂದ ಇರಿ ಎಂದು ಪೊಲೀಸ್​ ಆಯುಕ್ತರು ಹೇಳಿದ್ದರು. ನಕಲಿ ಖಾತೆ ಮೂಲಕ ಹಣ ಕಳಿಸಲು ಹೇಳಬಹುದು. ಆ ಬಗ್ಗೆ ಎಲ್ಲರೂ ಜಾಗರೂಕರಾಗಿ ಎಂದು ಸೂಚಿಸಿದ್ದರು. ಪೊಲೀಸ್ ಆಯುಕ್ತರ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಯಾಗಿರುವುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿತ್ತು.

ಪೊಲೀಸರಿಗೆ ದೂರು

ಉಡುಪಿ ಡಿಸಿ ಹೆಸರಿನಲ್ಲಿ 3ನೇ ಬಾರಿ ನಕಲಿ ಫೇಸ್​​ಬುಕ್ ಖಾತೆ: ಇನ್ನೊಂದೆಡೆ ಜಿಲ್ಲಾಧಿಕಾರಿ ಹೆಸರಿನಲ್ಲಿ ಮೂರನೇ ಬಾರಿ ನಕಲಿ ಫೇಸ್​​ಬುಕ್ ಖಾತೆ ತೆರೆಯಲಾಗಿದ್ದು, ಉಡುಪಿ ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ (ಜೂನ್​ 4-2021) ದಾಖಲಾಗಿತ್ತು.

ಈ ಹಿಂದೆ ಎರಡು ಬಾರಿ ಡಿಸಿ ಉಡುಪಿ ಎಂಬ ಹೆಸರಿನಲ್ಲಿ ನಕಲಿ ಫೇಸ್​​ಬುಕ್ ಖಾತೆ ತೆರೆದು, ಹಣಕ್ಕಾಗಿ ಬೇಡಿಕೆ ಇಡಲಾಗಿತ್ತು. ಮೇ 31 ರಂದು ಮೂರನೇ ಬಾರಿ ನಕಲಿ ಫೇಸ್​​ಬುಕ್ ಖಾತೆ ತೆರೆದು, ಅದರಲ್ಲಿ ಪ್ರೊಫೈಲ್ ಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಅವರ ಭಾವಚಿತ್ರವನ್ನು ದುರ್ಬಳಕೆ ಮಾಡಲಾಗಿತ್ತು.

ಇದನ್ನೂ ಓದಿ:ಉಡುಪಿ ಡಿಸಿ ಹೆಸರಿನಲ್ಲಿ 3ನೇ ಬಾರಿ ನಕಲಿ ಫೇಸ್​​ಬುಕ್ ಖಾತೆ, ಹಣಕ್ಕೆ ಬೇಡಿಕೆ

ABOUT THE AUTHOR

...view details