ಕರ್ನಾಟಕ

karnataka

ETV Bharat / state

ಮುಸ್ಲಿಂ ಯುವಕರ ಮೇಲೆ ಸುಳ್ಳು ಪ್ರಕರಣ ದಾಖಲು ; ಸತ್ಯಶೋಧನೆಗೆ ಆಗ್ರಹ - False case against Muslim youth

ಸ್ಥಳೀಯ ಚುನಾವಣೆ ಹತ್ತಿರ ಬರುತ್ತಿದ್ದಂತೆ ಒಂದು ಸಮುದಾಯವನ್ನು ಗುರಿಯಾಗಿರಿಸಿಕೊಂಡು ಸುಳ್ಳು ಪ್ರಕರಣ ದಾಖಲು ಮಾಡಲಾಗುತ್ತಿದೆ. ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಅಪಾದನೆ, ಪ್ರಕರಣಗಳಲ್ಲಿ ಸಿಲುಕಿಸಿ ದೌರ್ಜನ್ಯದ ಆರೋಪ ಕೇಳಿ ಬರುತ್ತಿದೆ. ಅದಲ್ಲದೆ ಕೆಲ ಸಂಘಟನೆಗಳ ನಾಯಕರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿ ಕೋಮುಗಲಭೆ ಸೃಷ್ಟಿಸಲು ಸಂಚು ರೂಪಿಸುತ್ತಿರುವಂತೆ ಕಾಣುತ್ತಿದೆ ಎಂದು ಎಸ್.ಡಿ.ಪಿ.ಐ.ತಾಲೂಕು ಅಧ್ಯಕ್ಷ ಹೈದರ್ ನೀರ್ಸಾಲ್ ಹೇಳಿದ್ದಾರೆ.

False case against Muslim youth, demand for truthfulness
ಮುಸ್ಲಿಂ ಯುವಕರ ಮೇಲೆ ಸುಳ್ಳು ಪ್ರಕರಣ ದಾಖಲು, ಸತ್ಯಶೋಧನೆಗಾಗಿ ಆಗ್ರಹ

By

Published : Sep 16, 2020, 6:44 PM IST

ಬೆಳ್ತಂಗಡಿ:ಕಳೆದ ಕೆಲವು ದಿನಗಳ ಹಿಂದೆ ತಾಲೂಕಿನಲ್ಲಿ ಮುಸ್ಲಿಂ ಸಮುದಾಯದ ಯುವಕರ ಬಗ್ಗೆ ಸುಳ್ಳು ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಅದಲ್ಲದೆ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ. ಈ ಬಗ್ಗೆ ಸತ್ಯಶೋಧನಾ ತಂಡವನ್ನು ತಾಲೂಕು ಆಡಳಿತ ಹಾಗೂ ನ್ಯಾಯಾಧೀಶರ ನೇತೃತ್ವದ ವಿಶೇಷ ತಂಡ ರಚಿಸಬೇಕು ಎಂದು ಎಸ್.ಡಿ.ಪಿ.ಐ.ತಾಲೂಕು ಅಧ್ಯಕ್ಷ ಹೈದರ್ ನೀರ್ಸಾಲ್ ಆಗ್ರಹಿಸಿದ್ದಾರೆ.

ಬೆಳ್ತಂಗಡಿ ತಾಲೂಕು ಮುಸ್ಲಿಂ ಸಂಘಟನೆಗಳ ಒಕ್ಕೂಟದ ವತಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಹೈದರ್, ಬೆಳಾಲು ಹಾಗೂ ನಿನ್ನಿಕಲ್ಲು ಇಲ್ಲಿ ನಡೆದ ಎರಡೂ ಘಟನೆಗಳಲ್ಲಿಯೂ ದಲಿತ ಸಮುದಾಯದ ಯುವತಿಯರನ್ನು ಬಳಕೆ ಮಾಡಿಕೊಳ್ಳಲಾಗಿದೆ.

ಅಲ್ಲದೆ, ಬೆಳಾಲಿನ ಸುರುಳಿಯಲ್ಲಿ ನಡೆದ ಪ್ರಕರಣದ ಬಳಿಕ ತನಿಖಾಧಿಕಾರಿ ಬಂಟ್ವಾಳ ಡಿವೈಎಸ್‌ಪಿ ಅವರ ಬಳಿ ಸ್ಥಳೀಯ ನಾಗರಿಕರು ಘಟನೆ ಬಗ್ಗೆ ಸಂದೇಹ ವ್ಯಕ್ತಪಡಿಸಿ ಬೀಡಿ ಬ್ರಾಂಚ್ ಮಾಲೀಕರ ಪರ ಹೇಳಿಕೆ ನೀಡಿದ್ದಾರೆ. ಆದ್ದರಿಂದ ಇದು ಪೂರ್ವಯೋಜಿತ ಕೃತ್ಯವಾಗಿದೆ ಎಂದ ಅವರು ಎರಡೂ ಪ್ರಕರಣಗಳ ಬಗ್ಗೆ ಸತ್ಯಶೋಧನೆ ನಡೆಸಿ ಇದರ ಹಿಂದೆ ಇರುವ ನೈಜ ಕಾರಣವನ್ನು ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದರು.

ಸ್ಥಳೀಯ ಚುನಾವಣೆ ಹತ್ತಿರ ಬರುತ್ತಿದ್ದಂತೆ ಒಂದು ಸಮುದಾಯವನ್ನು ಗುರಿಯಾಗಿರಿಸಿಕೊಂಡು ಈ ರೀತಿ ನಡೆಯುತ್ತಿದೆ. ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಅಪಾದನೆ, ಪ್ರಕರಣಗಳಲ್ಲಿ ಸಿಲುಕಿಸಿ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

ಕೆಲವು ಸಂಘಟನೆಗಳ ನಾಯಕರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿ ಕೋಮುಗಲಭೆ ಸೃಷ್ಟಿಸಲು ಸಂಚು ನಡೆಸುತ್ತಿರುವಂತೆ ಕಾಣುತ್ತಿದೆ. ಈ ಬಗ್ಗೆ ಪೊಲೀಸ್ ಗುಪ್ತಚರ ಇಲಾಖೆ ಸೂಕ್ತ ತನಿಖೆ ಕೈಗೊಳ್ಳಬೇಕು.ಈ ವಿಚಾರಗಳನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹೋರಾಟ ಅನಿವಾರ್ಯವಾದೀತು ಎಂದಿದ್ದಾರೆ.

ABOUT THE AUTHOR

...view details