ಬಂಟ್ವಾಳ :ರೈತರ ಪರವಾಗಿದ್ದೇವೆ ಎಂದು ಅಧಿಕಾರ ಸ್ವೀಕರಿಸಿದ ಬಿ ಎಸ್ ಯಡಿಯೂರಪ್ಪನವರು ಭೂಸುಧಾರಣಾ ಕಾಯ್ದೆ ತಿದ್ದುಪಡಿ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ರಾಜ್ಯ ಕಾರ್ಯದರ್ಶಿ ರವಿಕಿರಣ್ ಪುಣಚ ಹೇಳಿದರು.
ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ವತಿಯಿಂದ ಇಲ್ಲಿನ ಮಿನಿ ವಿಧಾನಸೌಧದ ಮುಂಭಾಗ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಭೂಸುಧಾರಣಾ ಕಾಯ್ದೆ, ವಿದ್ಯುತ್ ಕಾಯ್ದೆ, ಎಪಿಎಂಸಿ ಕಾಯ್ದೆ, ಬೀಜ ಕಾಯ್ದೆ ಹಾಗೂ ಅಗತ್ಯ ಸರಕುಗಳ ಕಾಯ್ದೆ ತಿದ್ದುಪಡಿಗಳು ರೈತರ ಮತ್ತು ಜನಸಾಮಾನ್ಯರ ಮೇಲೆ ಬರೆ ಎಳೆದಂತಾಗಿದೆ ಎಂದರು. ರೈತರ ಉಳಿವಿಗೆ ಹಾಗೂ ಜನಸಾಮಾನ್ಯರ ಹಿತದೃಷ್ಟಿಯಿಂದ ದ.ಕ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಿ ಸರ್ಕಾರದ ನಿಲುವುಗಳನ್ನು ಖಂಡಿಸಲಾಗುತ್ತಿದೆ ಎಂದರು.