ಕರ್ನಾಟಕ

karnataka

ETV Bharat / state

ರೈತರ ಹೋರಾಟ ಮೋದಿ ವಿರುದ್ಧ ಮಾತ್ರವಲ್ಲ, ಕಾರ್ಪೊರೇಟ್ ಕಂಪನಿಗಳ ವಿರುದ್ಧವೂ ಆಗಿದೆ : ಮಾಜಿ ಸಚಿವೆ ಶೈಲಜಾ ಟೀಚರ್ - ಕೇರಳ ಮಾಜಿ ಸಚಿವೆ ಶೈಲಚಾ ಟೀಚರ್

ಕೇರಳದ ಮಾಜಿ ಸಚಿವೆ ಶೈಲಜಾ ಟೀಚರ್, ಮಂಗಳೂರಿನಲ್ಲಿ ನಡೆದ ಸಿಪಿಎಂ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ 23ನೇ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Keral forme minister  Shailacha Teacher
ಮಾಜಿ ಸಚಿವೆ ಶೈಲಜಾ ಟೀಚರ್

By

Published : Nov 24, 2021, 1:39 PM IST

ಮಂಗಳೂರು:ಕೇಂದ್ರದಲ್ಲಿ ಹೆಸರಿಗೆ ಮಾತ್ರ ಬಿಜೆಪಿ ಸರ್ಕಾರವಿದ್ದು, ಸಂಘ ಪರಿವಾರ ಆಡಳಿತ ನಡೆಸುತ್ತಿದೆ. ದೇಶದ ಬಹುತೇಕ ಕಡೆಗಳಲ್ಲಿ ಭಕ್ತಿಯ ಹೆಸರಿನಲ್ಲಿ ಜನರಿಗೆ ಮಂಕುಬೂದಿ ಎರಚಿ ಅಧಿಕಾರಕ್ಕೇರಿದ ಬಿಜೆಪಿ, ಕೇರಳದಲ್ಲಿ ತಳವೂರಲು ಯತ್ನಿಸುತ್ತಿದೆ. ಆದರೆ, ಸಿಪಿಎಂ ಅದಕ್ಕೆ ಎಂದೂ ಅವಕಾಶ ಕೊಡುವುದಿಲ್ಲ ಎಂದು ಕೇರಳದ ಮಾಜಿ ಸಚಿವೆ ಶೈಲಜಾ ಟೀಚರ್ ಹೇಳಿದರು.

ಗುರುಪುರ ಕೈಕಂಬದ ಖಾಸಗಿ ಸಭಾಗೃಹದ ಮೈದಾನದಲ್ಲಿ ಸಿಪಿಎಂ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ 23ನೇ ಸಮ್ಮೇಳನದ ಸಮಾರೋಪ ಸಮಾರಂಭವನ್ನು ಏರ್ಪಡಿಸಿತ್ತು. ಈ ವೇಳೆ ಮಾತನಾಡಿದ ಅವರು, ದೇಶದಲ್ಲಿ ಕಾರ್ಪೊರೇಟ್ ಕಂಪನಿಗಳ ಸರ್ಕಾರವಿದೆ. ಇದೀಗ ಅದರ ವಿರುದ್ಧವೂ ಹೋರಾಟ ಆರಂಭವಾಗಿದೆ. ರೈತರ ಹೋರಾಟ ಕೇವಲ ನರೇಂದ್ರ ಮೋದಿಯ ವಿರುದ್ಧ ಮಾತ್ರವಲ್ಲ. ಬದಲಾಗಿ ಕಾರ್ಪೊರೇಟ್ ಕಂಪನಿಗಳ ವಿರುದ್ಧವೂ ಆಗಿದೆ ಎಂದರು.

ಬಿಜೆಪಿ ಕಾರ್ಯಕರ್ತರು ಮೌನಕ್ಕೆ ಶರಣಾಗಿದ್ದೇಕೆ?

ಪ್ರಧಾನಿ ನರೇಂದ್ರ ಮೋದಿಯವರು ರೈತರ ಅಭಿವೃದ್ಧಿ ಹೆಸರಲ್ಲಿ ಕೃಷಿ ಕಾಯ್ದೆಯನ್ನು ಜಾರಿಗೊಳಿಸಿದರು. ಈ ಕಾಯ್ದೆಯನ್ನು ಸಮರ್ಥಿಸಿದ್ದ ಬಿಜೆಪಿ ಕಾರ್ಯಕರ್ತರು ಇದೀಗ ವೌನಕ್ಕೆ ಶರಣಾಗಿದ್ದಾರೆ. ಬಿಜೆಪಿಯ ನೀತಿಗಳು ಕಾರ್ಪೊರೇಟ್ ನೀತಿಗಳಾಗಿದ್ದು, ದೇಶದಲ್ಲಿ ಧರ್ಮಗಳ ಮಧ್ಯೆ ವೈಷಮ್ಯ ತಂದು ಗೊಂದಲ ಸೃಷ್ಟಿಸುತ್ತದೆ ಎಂದರು.

ಈ ದೇಶದಲ್ಲಿ ಕೇವಲ ಹಿಂದೂಗಳು ಇದ್ದರೆ ಸಾಕು ಎಂದು ಮೋದಿ, ಅಮಿತ್ ಶಾ, ಸಂಘ ಪರಿವಾರದ ಮುಖಂಡರು ಹೇಳುತ್ತಾರೆ. ಹಿಂದೂ ಹೆಸರಲ್ಲಿ ಮೇಲ್ಜಾತಿಯವರು ಅಭಿವೃದ್ಧಿ ಹೊಂದಿದರೆ, ಇತರರು ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಹಿಂದೆ ಗುಜರಾತ್‌ನಲ್ಲಿ ಹಿಂದೂ - ಮುಸ್ಲಿಂ ಎಂಬ ಭೇದ ಭಾವ ಇರಲಿಲ್ಲ, ಕರಸೇವೆಯ ಹೆಸರಲ್ಲಿ ಜನಾಂಗೀಯ ಹತ್ಯೆ ಮಾಡಲಾಗಿದೆ. ಬಿಜೆಪಿಯ ಒಡೆದಾಳುವ ಈ ನೀತಿಯ ವಿರುದ್ಧ ಹೋರಾಟ ತೀವ್ರಗೊಳಿಸದಿದ್ದರೆ ಮುಂದಿನ ದಿನಗಳಲ್ಲಿ ಮತ್ತಷ್ಟು ಸಮಸ್ಯೆ ಎದುರಾಗುವ ಅಪಾಯವಿದೆ ಎಂದು ಎಚ್ಚರಿಸಿದರು.

ಇದನ್ನೂ ಓದಿ: ACB Raid: ಗದಗ ಕೃಷಿ‌ ಅಧಿಕಾರಿಯ ಶಿವಮೊಗ್ಗ ಮನೆಯಲ್ಲಿ ಕೆಜಿಗಟ್ಟಲೆ ಚಿನ್ನ, ₹15 ಲಕ್ಷ ನಗದು ಪತ್ತೆ

ABOUT THE AUTHOR

...view details