ಬೆಳ್ತಂಗಡಿ: ತಂದೆ ಮತ್ತು ಮಗನ ನಡುವಿನ ಜಗಳ ತಾರಕಕ್ಕೇರಿ ಮಗನ ಕೊಲೆಯೊಂದಿಗೆ ಅಂತ್ಯವಾದ ಘಟನೆ ಉಜಿರೆ ಗ್ರಾಮದಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಉಜಿರೆಯ ಕೊಡೆಕಲ್ಲು ನಿವಾಸಿ ಕೃಷ್ಣಯ್ಯ ಆಚಾರಿ ಎಂಬವರು ಅಕ್ಟೋಬರ್ 29ರಂದು ಎಂದಿನಂತೆ ಮಲಗಿದ್ದಾಗ ಮಗ ಜಗದೀಶ್ ಆಚಾರಿ ತಂದೆಯೊಂದಿಗೆ ಯಾವುದೋ ಕಾರಣಕ್ಕೆ ಮಾತು ಆರಂಭಿಸಿದ್ದಾರೆ. ತದನಂತರ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಕೋಪಗೊಂಡ ತಂದೆ ಮಗನ ಕುತ್ತಿಗೆಗೆ ಚೂರಿಯಿಂದ ಇರಿದಿದ್ದಾರೆ.
ಗಂಭೀರವಾಗಿ ಗಾಯಗೊಂಡ ಜಗದೀಶ್ ಅವರನ್ನು ಮನೆಯವರು ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಸೇರಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಜಗದೀಶ್ ಸಾವನ್ನಪ್ಪಿದ್ದಾರೆ.