ಕರ್ನಾಟಕ

karnataka

ETV Bharat / state

ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಹಿಳೆ ಅರೆಸ್ಟ್

ಪೊಲೀಸ್​ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಹಿಳೆ- 9 ವರ್ಷಗಳ ನಂತರ ಆರೋಪಿಯ ಬಂಧನ.

By

Published : Feb 10, 2023, 9:47 AM IST

Updated : Feb 13, 2023, 7:11 AM IST

The  accused women sujatha
ಆರೋಪಿ ಮಹಿಳೆ ಸುಜಾತ

ಬಂಟ್ವಾಳ(ದಕ್ಷಿಣ ಕನ್ನಡ): ನ್ಯಾಯಾಲಯಕ್ಕೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಮಹಿಳಾ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್​ ಪ್ರಕರಣವೊಂದಕ್ಕೆ ಸಂಬಂಧಿಸಿ ಸುಜಾತಾ ಎಂಬುವರು ವಿಟ್ಲ ಪೊಲೀಸರಿಗೆ ಅಪರಾಧ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಕಾಗಿದ್ದರು. ಆದರೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಕೇರಳಕ್ಕೆ ಬಂದಿದ್ದರು. ಈ ಸಂದರ್ಭದಲ್ಲಿ ಆರೋಪಿಯನ್ನು ಬಂಧಿಸಿಲಾಗಿದೆ.

ಮೂಲತಃ ಆರೋಪಿ ಸುಜಾತ ಕೇರಳ ರಾಜ್ಯದ ಪಯ್ಯನ್ನೂರು ಜಿಲ್ಲೆಯ ಕುಂಞಮಂಗಲ ಪಾಣಚೇರಿ ನಿವಾಸಿಯಾಗಿದ್ದು, ಇವರ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ 2013ರಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಸುಮಾರು 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ವಿದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದರು.

ಹೀಗೆ ಕಾನೂನಿನ ಕಣ್ಣಿಗೆ ಮಣ್ಣೆರೆಚಿದ್ದ ಈಕೆ ಇದೇ ಫೆ.8ರಂದು ರಾತ್ರಿ 2.30 ಗಂಟೆಗೆ ಕೇರಳ ರಾಜ್ಯದ ಕೋಝಿಕೊಡ್ ಅಂತಾರಾಷ್ಟೀಯ ವಿಮಾನ ನಿಲ್ದಾಣಕ್ಕೆ ವಿದೇಶದಿಂದ ಬಂದಿದ್ದು, ಇಮಿಗ್ರೇಷನ್ ಅಧಿಕಾರಿಗಳು ಬಂಧಿಸಿ ಮಾಹಿತಿಯನ್ನು ನೀಡಿ ಸ್ಥಳೀಯ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದರು. ವಿಟ್ಲ ಪೊಲೀಸ್ ಠಾಣಾ ಎ.ಎಸ್.ಐ. ಜಯರಾಮ ಮತ್ತು ಮಹಿಳಾ ಸಿಬ್ಬಂದಿ ಸಂಗೀತಾ ಅವರು ಕೇರಳ ರಾಜ್ಯಕ್ಕೆ ತೆರಳಿ ಆರೋಪಿ ಸುಜಾತಾರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಪ್ರವಾಸಿಗರಿಗೆ ಗಾಂಜಾ ಮಾರುತ್ತಿದ್ದ ಆರೋಪಿಗಳ ಬಂಧನ: ಗುರುವಾರ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಸಿದ್ಧ ಹಂಪಿ ಮತ್ತು ಆನೆಗೊಂದಿಗೆ ಪ್ರವಾಸಕ್ಕೆಂದು ಬರುತ್ತಿದ್ದ ವಿದೇಶಿಗರಿಗೆ ಹಾಗೂ ಅಲ್ಲಿನ ಸ್ಥಳಿಯ ಪ್ರವಾಸಿಗರಿಗೆ 6 ಮಂದಿ ಯುವಕರು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದರು. ನಿಖರ ಮಾಹಿತಿ ಮೇರೆಗೆ ಸತತ ಕಾರ್ಯಚರಣೆಯಿಂದ ಪೊಲೀಸರು ಈ ಆರೋಪಿಗಳ ಜಾಲವನ್ನು ಭೇದಿಸಿ ಬಂಧಿಸಿದ್ದರು.

ಇದನ್ನೂ ಓದಿ:ಮದುವೆ ನಿರಾಕರಿಸಿದ್ದಕ್ಕೆ ಕತ್ತು ಹಿಸುಕಿದ ಪಾಗಲ್​ ಪ್ರೇಮಿ.. ಬೀದರ್​ನಲ್ಲಿ ಪ್ಯಾರಾ ಮೆಡಿಕಲ್​ ವಿದ್ಯಾರ್ಥಿನಿಯ ಕೊಲೆ

Last Updated : Feb 13, 2023, 7:11 AM IST

ABOUT THE AUTHOR

...view details