ದಕ್ಷಿಣ ಕನ್ನಡ:ಕಡಬ ತಹಶೀಲ್ದಾರ್ ಕಚೇರಿಯಲ್ಲಿ ಇಂದು ಬೆಳಗ್ಗೆ ಧ್ವಜಾರೋಹಣದ ವೇಳೆ ಕುಸಿದು ಬಿದ್ದು ಅಸ್ವಸ್ಥಗೊಂಡು ಮೃತಪಟ್ಟ ನಿವೃತ್ತ ಸೈನಿಕನ ಪಾರ್ಥಿವ ಶರೀರದ ಅಂತಿಮ ಸಂಸ್ಕಾರ ನೆರವೇರಿದೆ.
ನಿವೃತ್ತ ಸೈನಿಕ ಗಂಗಾಧರ ಗೌಡ ಅವರ ಮೃತದೇಹವನ್ನು ಸಾರ್ವಜನಿಕರ ಅಂತಿಮ ದರ್ಶನಕಾಗಿ ತಹಶೀಲ್ದಾರ್ ಕಚೇರಿ ಎದುರು ಇಡಲಾಗಿತ್ತು. ಕುಟುಂಬ ಸದಸ್ಯರು, ಸ್ನೇಹಿತರು ಸೇರಿದಂತೆ ವಿದ್ಯಾರ್ಥಿಗಳು ಯೋಧನ ಅಂತಿಮ ದರ್ಶನ ಪಡೆದರು. ಈ ಸಂದರ್ಭದಲ್ಲಿ ಗಂಗಾಧರ ಅಮರ್ ರಹೇ, ಭಾರತ್ ಮಾತಾ ಕೀ ಜೈ ಎಂಬ ಘೋಷಣೆಗಳನ್ನು ಕೂಗಿ ಕಂಬನಿ ಮಿಡಿದರು.