ಬೆಳ್ತಂಗಡಿ:ಸಿಎಂ ಎಂಬ ಪದದ ಅರ್ಥವನ್ನು ಬದಲಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಮಫಲಕ ಎಡಿಟ್ ಮಾಡಿ ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡಿದ ಬಿಜೆಪಿ ಶಾಸಕ ಹರೀಶ್ ಪೂಂಜ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಿಎಂ ಸಿದ್ದರಾಮಯ್ಯ ಫೋಟೊ ಮುಂದೆ ಹಾಗೂ ಗೃಹಕಚೇರಿ ಕಾವೇರಿ ನಿವಾಸದ ಗೇಟ್‌ನಲ್ಲಿ ‘ಕಲೆಕ್ಷನ್ ಮಾಸ್ಟರ್ ಸಿದ್ದರಾಮಯ್ಯ’ ಎಂದು ಎಡಿಟ್ ಮಾಡಿ, ಆ ಪೋಸ್ಟ್ ಅನ್ನು ಹರೀಶ್ ಪೂಂಜರ ಪ್ರೊಫೈಲ್ ಫೋಟೋ ಇರುವ ಫೇಸ್ಬುಕ್ನಲ್ಲಿ ಅಪ್ಲೋಡ್ ಮಾಡಲಾಗಿದೆ. ಈ ವಿಚಾರವಾಗಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಶೇಖರ್ ಕುಕ್ಕೇಡಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪೂಂಜ ವಿರುದ್ಧ ಅ.26 ರಂದು ಐಪಿಸಿ ಸೆಕ್ಷನ್ 1869 U/S 504, 505(2) ಅಡಿಯಲ್ಲಿ ಕೇಸು ದಾಖಲಾಗಿದೆ.
ಸಿಎಂ ನಾಮಫಲಕ ಎಡಿಟ್ ಮಾಡಿ ಫೇಸ್‌ಬುಕ್ ಪೋಸ್ಟ್: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್ಐಆರ್ - ಬೆಳ್ತಂಗಡಿ ಪೊಲೀಸ್ ಠಾಣೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಮಫಲಕ ಎಡಿಟ್ ಮಾಡಿ ಫೇಸ್ಬುಕ್ನಲ್ಲಿ ಅಪ್ ಲೋಡ್ ಮಾಡಿರುವ ಶಾಸಕ ಹರೀಶ್ ಪೂಂಜ ಅವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
Published : Oct 27, 2023, 9:22 PM IST
ಫೋಟೋ ತಿರುಚಿ ಅಪ್ಲೋಡ್ ಮಾಡಿದ್ದ ವ್ಯಕ್ತಿ ವಿರುದ್ಧ ಎಫ್ಐಆರ್:ಓರ್ವ ವ್ಯಕ್ತಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಫೋಟೋ ತಿರುಚಿ ಫೇಸ್ಬುಕ್ನಲ್ಲಿ ಪ್ರಕಟಿಸಿದ್ದರು. ಆತನ ವಿರುದ್ಧ ನಗರದ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸರ್ಕಾರ ಮಹಿಷಾ ದಸರಾಗೆ ಸಮ್ಮತಿ ಸೂಚಿಸಿದ್ದನ್ನು ವಿರೋಧಿಸುವ ಭರದಲ್ಲಿ ಆತ ಫೇಸ್‍ಬುಕ್ ಖಾತೆಯಲ್ಲಿ ಫೋಟೊವೊಂದಕ್ಕೆ ಸಿಎಂ ಸಿದ್ದರಾಮಯ್ಯ ಮುಖ ಬಳಸಿ ಎಡಿಟ್ ಮಾಡಿದ್ದಲ್ಲದೇ, ಅವಾಚ್ಯ ಪದಗಳಿಂದ ನಿಂದಿಸಿ ಅಪ್ಲೋಡ್ ಮಾಡಿದ್ದರು. ಹೀಗಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಕಾನೂನು, ಮಾನವ ಹಕ್ಕುಗಳ ಮತ್ತು ಮಾಹಿತಿ ಹಕ್ಕು ವಿಭಾಗದ ವಕ್ತಾರ ಹಾಗೂ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ತುಮಕೂರಿನ ಗುಬ್ಬಿ ಮೂಲದ ಶ್ರೀನಿವಾಸ್ ಎಂಬಾತನ ವಿರುದ್ಧ ದೂರು ನೀಡಿದ್ದರು. ಅದರನ್ವಯ ಆರೋಪಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಇದನ್ನೂ ಓದಿ:ಮಂಗಳೂರು ಪೊಲೀಸ್ ಕಮಿಷನರ್ ಹೆಸರಿನಲ್ಲಿ ನಕಲಿ ವಾಟ್ಸ್ಆ್ಯಪ್ ಸೃಷ್ಟಿಸಿ ವಂಚನೆಗೆ ಯತ್ನ