ಕರ್ನಾಟಕ

karnataka

ETV Bharat / state

'ಡಿಸಿ ಕೊರಳಪಟ್ಟಿ ಹಿಡಿಯುತ್ತೇನೆ' ಎಂಬ ಹೇಳಿಕೆ: ಜಗದೀಶ ಕಾರಂತ ವಿರುದ್ಧ ಎಫ್​ಐಆರ್​ - fir against hindu jagarana vedike leader

ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರ ಮೇಲೆ ಏಕವಚನದಲ್ಲಿ ವಾಗ್ದಾಳಿ ನಡೆಸಿ ನಿಂದಿಸಿದ್ದ ಜಾಗರಣಾ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ ಕಾರಂತ ವಿರುದ್ಧ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​ ದಾಖಲಾಗಿದೆ.

fir registered against jagadish karantha
ಜಗದೀಶ ಕಾರಂತ ವಿರುದ್ಧ ಎಫ್​ಐಆರ್​

By

Published : Nov 24, 2021, 10:27 PM IST

ಬಂಟ್ವಾಳ(ದಕ್ಷಿಣ ಕನ್ನಡ):ದ.ಕ.ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರ ಮೇಲೆ ಏಕವಚನದಲ್ಲಿ ವಾಗ್ದಾಳಿ ನಡೆಸಿ ನಿಂದಿಸಿದ್ದ ಹಿಂದೂ ಜಾಗರಣಾ ವೇದಿಕೆಯ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಜಗದೀಶ ಕಾರಂತ ವಿರುದ್ಧ ಎಫ್​ಐಆರ್​​ ದಾಖಲಾಗಿದೆ.

ನವೆಂಬರ್ 21ರಂದು ಬಂಟ್ವಾಳ ತಾಲೂಕಿನ ಕಾವಳಮುಡೂರು ಗ್ರಾಮದ ಕಾರಿಂಜದಲ್ಲಿ ನಡೆದ ರುದ್ರಗಿರಿಯ ರಣಕಹಳೆ ಕಾರ್ಯಕ್ರಮದಲ್ಲಿ ''ಅಕ್ರಮ ಗಣಿಗಾರಿಕೆ ನಿಲ್ಲಿಸಲು ಜಿಲ್ಲಾಧಿಕಾರಿಗೆ 30 ದಿನಗಳ ಕಾಲಾವಕಾಶ ನೀಡುತ್ತಿದ್ದೇವೆ. ತಪ್ಪಿದ್ದಲ್ಲಿ ಡಿ. 21ರಂದು ಸಾವಿರಾರು ಜನರೊಂದಿಗೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ, ಜಿಲ್ಲಾಧಿಕಾರಿಯ ಕೊರಳಪಟ್ಟಿಯನ್ನೇ ಹಿಡಿಯುತ್ತೇವೆ. ತಾಕತ್ತಿದ್ದರೆ ಗಣಿಗಾರಿಕೆ ನಿಲ್ಲಿಸು. ಇಲ್ಲದಿದ್ದರೆ ವರ್ಗಾವಣೆ ತೆಗೆದುಕೊಂಡು, ಹೊರಗೆ ಹೋಗು'' ಎಂದು ಏಕವಚನದಲ್ಲಿ ಮಾತಾಡಿ ಜಗದೀಶ್​ ಆಕ್ರೋಶ ವ್ಯಕ್ತಪಡಿಸಿದ್ದರು.

ಜಗದೀಶ ಕಾರಂತ ವಿರುದ್ಧ ಎಫ್​ಐಆರ್​

ಅಕ್ರಮ ಗಣಿಗಾರಿಕೆಯನ್ನು 24 ಗಂಟೆಯೊಳಗೆ ನಿಲ್ಲಿಸುವ ಅಧಿಕಾರ ಜಿಲ್ಲಾ ಉಸ್ತುವಾರಿ ಮಂತ್ರಿ ಮತ್ತು ಜಿಲ್ಲಾಧಿಕಾರಿಗೆ ಇದೆ. ಗಣಿಗಾರಿಕೆ ನಿಲ್ಲಿಸಲು ಅಸಾಧ್ಯವಾದರೆ ರಾಜೀನಾಮೆ ನೀಡಿ ಮನೆಗೆ ಹೋಗು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರಿಗೂ ಜಗದೀಶ್ ಕಾರಂತ ತಾಕೀತು ಮಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿ ದ.ಕ.ಜಿಲ್ಲಾಧಿಕಾರಿ ಡಾ. ಕೆ.ವಿ.ರಾಜೇಂದ್ರ ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಕಲಂ:153,117, 504, 506, 189 ಐಪಿಸಿಯಂತೆ ಪ್ರಕರಣ ದಾಖಲಾಗಿದೆ.

ಏಕವಚನ ಮತ್ತು ಅಸಭ್ಯವಾಗಿ ಮಾತುಗಳನ್ನಾಡುವ ಮೂಲಕ ಜಿಲ್ಲಾಧಿಕಾರಿ ಹುದ್ದೆಗೆ ಅಗೌರವ ತೋರಿಸಿರುವುದಲ್ಲದೇ, ಸರಕಾರಿ ಅಧಿಕಾರಿಗೆ ಬೆದರಿಕೆಯೊಡ್ಡುವ ರೀತಿಯಲ್ಲಿ ಪ್ರಚೋದನೆಯನ್ನು ಹಾಗೂ ಅಪರಾಧಕ್ಕೆ ಪ್ರೇರಣೆ ನೀಡಿರುತ್ತಾರೆ. ಜಗದೀಶ್ ಕಾರಂತ್ ಅಪರಾಧಿಕ ಕೃತ್ಯವನ್ನು ಎಸಗುವ ಮನೋಧೋರಣೆ ಹೊಂದಿ ಪ್ರಚೋದನಾಧಿಕಾರಿಯಾಗಿ ಬೆದರಿಕೆಯೊಡ್ಡಿರುವುದರಿಂದ ಮತ್ತು ಸಾವಿರಾರು ಜನಕ್ಕೆ ಅಪರಾಧಿಕ ಕೃತ್ಯವೆಸಗಲು ಪ್ರೇರಣೆ ನೀಡಿ ಅಪರಾಧಿಕಾ ಭೀತಿಯನ್ನುಂಟು ಮಾಡಿರುತ್ತಾರೆ. ಡಿಸೆಂಬರ್ 21 ಕ್ಕೆ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ಜಿಲ್ಲಾಧಿಕಾರಿ ಕಚೇರಿಗೆ ಲಗ್ಗೆ ಹಾಕಿ ಜಿಲ್ಲಾಧಿಕಾರಿಗಳ ಕೊರಳಪಟ್ಟಿ ಹಿಡಿಯಿರಿ ಎಂದು ಪ್ರಚೋದಿಸುವ ಮೂಲಕ ಸಾರ್ವಜನಿಕ ನೌಕರನಿಗೆ ಅಪರಾಧಿಕ ಭೀತಿಯನ್ನುಂಟು ಮಾಡಿರುವುದಲ್ಲದೇ, ಸರಕಾರಿ ಅಧಿಕಾರಿಗೆ ಹಾನಿ ಮತ್ತು ಹಲ್ಲೆ ಮಾಡಲು ಪ್ರಚೋದಿಸಿ ಬೆದರಿಕೆ ಹಾಕಿದ್ದಾಗಿ ಜಿಲ್ಲಾಧಿಕಾರಿ ದೂರಿನಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details