ಕರ್ನಾಟಕ

karnataka

ETV Bharat / state

ಮಂಗಳೂರಿನ ಸುಗಂಧ ದ್ರವ್ಯ ಕಂಪನಿಯಲ್ಲಿ ಮತ್ತೊಮ್ಮೆ ಅಗ್ನಿ ಅವಘಡ - Mangalore News

ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿರುವ ಸುರತ್ಕಲ್​ನ ಕ್ಯಾಟಸಿಂತ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ.

mangalore
ಅಗ್ನಿ ಅವಘಡಕ್ಕೆ ಸುಟ್ಟುಹೋದ ಕಂಪನಿ

By

Published : Aug 13, 2021, 7:03 AM IST

ಮಂಗಳೂರು: ನಾಲ್ಕು ತಿಂಗಳ ಹಿಂದೆ ಬೆಂಕಿಯ ಕೆನ್ನಾಲಿಗೆಗೆ ಸುಟ್ಟು ಹೋಗಿದ್ದ ಮಂಗಳೂರಿನ ವಿಶೇಷ ಆರ್ಥಿಕ ವಲಯದಲ್ಲಿರುವ(SEZ) ಸುಗಂಧ ದ್ರವ್ಯ ಕಂಪನಿಯಲ್ಲಿ ಇದೀಗ ಮತ್ತೊಮ್ಮೆ ಅಗ್ನಿ ಅವಘಡ ಸಂಭವಿಸಿದೆ. ಸುರತ್ಕಲ್​ನ ಕ್ಯಾಟಸಿಂತ್ ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯಲ್ಲಿ ಈ ಅವಘಡ ಉಂಟಾಗಿದೆ.

ಈ ಕೈಗಾರಿಕೆಯಲ್ಲಿ ಕಳೆದ ಏಪ್ರಿಲ್ ತಿಂಗಳಿನಲ್ಲಿ ಭಾರಿ ಅಗ್ನಿ ದುರಂತ ಸಂಭವಿಸಿ ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ನಾಶವಾಗಿದ್ದವು. ಬಳಿಕ ಇಲ್ಲಿ ದುರಸ್ತಿ ಕಾರ್ಯವೂ ನಡೆಯುತ್ತಿತ್ತು. ಆದರೆ ದುರಸ್ತಿ ಕಾರ್ಯ ಸಂದರ್ಭದಲ್ಲಿ ವೆಲ್ಡಿಂಗ್ ಮಾಡುತ್ತಿದ್ದಾಗ ಮತ್ತೆ ಬೆಂಕಿ ಹತ್ತಿಕೊಂಡಿದೆ.

ಅಗ್ನಿ ಅವಘಡಕ್ಕೆ ಸುಟ್ಟುಹೋದ ಕಂಪನಿ

ಈ ಹಿನ್ನೆಲೆಯಲ್ಲಿ ತಕ್ಷಣವೇ ಮಂಗಳೂರಿನ ಕದ್ರಿ ಅಗ್ನಿಶಾಮಕ ದಳದ ಸಿಬ್ಬಂದಿ, ಎಚ್​ಪಿಸಿಎಲ್​, ಎನ್​ಎಂಪಿಟಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ABOUT THE AUTHOR

...view details