ಮಂಗಳೂರು: ನಗರದ ಬಲ್ಮಠ ರೋಡ್ ನಲ್ಲಿರುವ ಬ್ಯಾಂಕ್ ಆಫ್ ಬರೋಡಾದ ಮಂಗಳೂರಿನ ಪ್ರಧಾನ ಕಚೇರಿಯಲ್ಲಿ ಬೆಳಗ್ಗೆ 4 ಗಂಟೆ ಸುಮಾರಿಗೆ ಬೆಂಕಿ ಅವಘಡ ಸಂಭವಿಸಿದೆ.
ಮಂಗಳೂರು: ಬ್ಯಾಂಕ್ ಆಫ್ ಬರೋಡಾ ಪ್ರಧಾನ ಕಚೇರಿಯಲ್ಲಿ ಅಗ್ನಿ ಅವಘಡ - ಬ್ಯಾಂಕ್ ಆಫ್ ಬರೋಡಾ
ಎಸಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮಂಗಳೂರು ಬ್ಯಾಂಕ್ ಆಫ್ ಬರೋಡಾ ಪ್ರಧಾನ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಸ್ಥಳಕ್ಕೆ ಪಾಂಡೇಶ್ವರದ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
Bank of baroda
ಎಸಿ ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿದ್ದು, ತಕ್ಷಣ ಸ್ಥಳಕ್ಕೆ ಪಾಂಡೇಶ್ವರದ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ, ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಗ್ನಿ ಅವಘಡದಲ್ಲಿ ಎಸಿ ಸಂಪೂರ್ಣ ಹಾನಿಗೊಳಗಾಗಿದ್ದು, ಯಾವುದೇ ದಾಖಲೆಗಳು ನಾಶವಾಗಿಲ್ಲ ಎಂದು ಮೂಲಗಳಿಂದ ತಿಳಿದು ಬಂದಿದೆ.
ಶಾರ್ಟ್ ಸರ್ಕ್ಯೂಟ್ ಹಿನ್ನೆಲೆಯಲ್ಲಿ ಇಂದು ಬ್ಯಾಂಕ್ ನಲ್ಲಿ ಸಿಬ್ಬಂದಿ ಯಾವುದೇ ಕೆಲಸ ಮಾಡುತ್ತಿಲ್ಲ. ಅಧಿಕಾರಿಗಳು ಗ್ರಾಹಕರನ್ನು ಪಕ್ಕದ ಅಂಬೇಡ್ಕರ್ ವೃತ್ತದಲ್ಲಿರುವ ಬ್ರ್ಯಾಂಚ್ ಗೆ ಕಳುಹಿಸುತ್ತಿದ್ದಾರೆ.