ಮಂಗಳೂರು:ನಗರದ ಪಣಂಬೂರು ಶ್ರೀ ನಂದನೇಶ್ವರ ದೇವಸ್ಥಾನದ ಚಪ್ಪರಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಇಂದು ನಡೆದಿದೆ.
ಪಣಂಬೂರು ನಂದನೇಶ್ವರ ದೇವಳದ ಚಪ್ಪರಕ್ಕೆ ಬೆಂಕಿ - Mangalore latest News
ಮಂಗಳೂರಿನ ಪಣಂಬೂರು ಶ್ರೀನಂದನೇಶ್ವರ ದೇವಸ್ಥಾನದಲ್ಲಿ ಜಾತ್ರಾ ಮಹೋತ್ಸವ ನಡೆಯುತ್ತಿದ್ದ ಸಂದರ್ಭದಲ್ಲಿ ಚಪ್ಪರಕ್ಕೆ ಆಕಸ್ಮಿಕ ಬೆಂಕಿ ತಗುಲಿದ ಘಟನೆ ಇಂದು ನಡೆದಿದೆ.
ದೇವಳದ ಚಪ್ಪರಕ್ಕೆ ಬೆಂಕಿ
ನಂದನೇಶ್ವರ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯುತ್ತಿದ್ದು, ಚಪ್ಪರಕ್ಕೆ ಅಕಸ್ಮಾತ್ತಾಗಿ ಬೆಂಕಿ ತಗುಲಿದೆ. ವಾರ್ಷಿಕ ಜಾತ್ರಾ ಮಹೋತ್ಸವದ ನಿಮಿತ್ತ ಬಲಿ ಪೂಜೆ ವೇಳೆ ಈ ಅವಘಡ ಸಂಭವಿಸಿದೆ.
ತಕ್ಷಣ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದೆ. ಈ ಸಂದರ್ಭ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.