ಮಂಗಳೂರು: ನಗರದ ಬಳ್ಳಾಲ್ ಬಾಗ್ನಲ್ಲಿರುವ ಫೀಲ್ಡ್ ಸ್ಟಾರ್ ಹೈಪರ್ ಮಾರ್ಕೆಟ್ ನಿನ್ನೆ ರಾತ್ರಿ ಬೆಂಕಿಗಾಹುತಿಯಾಗಿದ್ದು, ಅಂದಾಜು ಒಂದು ಕೋಟಿ ರೂ. ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.
ಮಂಗಳೂರಿನಲ್ಲಿ ಬೆಂಕಿಗಾಹುತಿಯಾದ ಹೈಪರ್ ಮಾರ್ಕೆಟ್: ಅಪಾರ ನಷ್ಟ - ಶಾರ್ಟ್ ಸರ್ಕ್ಯೂಟ್ನಿಂದ ಅಗ್ನಿ ಅವಘಡ
ಶಾರ್ಟ್ ಸರ್ಕ್ಯೂಟ್ ಸಂಭವಿಸಿ ರಾತ್ರಿ 11ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿಶಾಮಕ ದಳ ಬೆಂಕಿ ನಂದಿಸಿತ್ತು. ಇಂದು ಬೆಳಗ್ಗೆ ಮತ್ತೆ ಬೆಂಕಿ ಕಿಡಿ ಕಾಣಿಸಿಕೊಂಡಿರುವುದರಿಂದ ಅಗ್ನಿಶಾಮಕ ದಳ ಆಗಮಿಸಿ ಮತ್ತೊಮ್ಮೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.
ಶಾರ್ಟ್ ಸರ್ಕ್ಯೂಟ್ ಸಂಭವಿಸಿ ರಾತ್ರಿ 11ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿತ್ತು. ತಡರಾತ್ರಿಯವರೆಗೂ ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸಿ ಸಂಪೂರ್ಣ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮತ್ತೆ ಬೆಂಕಿ ಕಿಡಿ ಕಾಣಿಸಿಕೊಂಡಿರುವುದರಿಂದ ಮತ್ತೆ ಅಗ್ನಿಶಾಮಕ ದಳ ಆಗಮಿಸಿ ಮತ್ತೊಮ್ಮೆ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.
ಬೆಂಕಿ ಅವಘಡದಲ್ಲಿ ಸಾಕಷ್ಟು ನಷ್ಟ ಸಂಭವಿಸಿದ್ದು, ಎಲೆಕ್ಟ್ರಾನಿಕ್ ಸಾಮಗ್ರಿಗಳು, ಇನ್ನಿತರ ಬೆಲೆಬಾಳುವ ವಸ್ತುಗಳು ಸುಟ್ಟು ಕರಕಲಾಗಿದೆ. ಸುಮಾರು ಒಂದು ಕೋಟಿ ರೂ. ನಷ್ಟ ಅಂದಾಜಿಸಲಾಗಿದ್ದು, ಇನ್ನಷ್ಟೇ ನಿಖರ ಮಾಹಿತಿ ತಿಳಿದು ಬರಬೇಕಿದೆ.