ಕರ್ನಾಟಕ

karnataka

ETV Bharat / state

ಶಾಲೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆ: ಸಿಬ್ಬಂದಿ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ

ಕಡಬ ತಾಲೂಕಿನ ನೂಜಿಬಾಳ್ತಿಲ ಸರ್ಕಾರಿ ಶಾಲೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿತ್ತು. ಈ ವೇಳೆ, ಸಿಬ್ಬಂದಿ ಬೆಂಕಿ ನಂದಿಸಿ ಸಂಭವಿಸುತ್ತಿದ್ದ ಭಾರಿ ಅನಾಹುತವನ್ನು ತಪ್ಪಿಸಿದ್ದಾರೆ.

Gas cylinder leak at school
ಶಾಲೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆ

By

Published : Oct 25, 2021, 6:15 PM IST

Updated : Oct 25, 2021, 7:51 PM IST

ಕಡಬ:ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಡುಗೆ ಮಾಡುವ ವೇಳೆ ಗ್ಯಾಸ್ ಸೋರಿಕೆಯಿಂದ ಬೆಂಕಿ ಹಬ್ಬಿತ್ತು. ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ ದೊಡ್ಡ ಮಟ್ಟದ ಅನಾಹುತ ತಪ್ಪಿದೆ.

ಶಾಲೆಯಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆ

ಕಡಬ ತಾಲೂಕಿನ ನೂಜಿಬಾಳ್ತಿಲ ಸರ್ಕಾರಿ ಶಾಲೆಯಲ್ಲಿ ಘಟನೆ ನಡೆದಿದ್ದು, ಅಡುಗೆಗೆ ತಯಾರಿ ಮಾಡುತ್ತಿದ್ದ ಸಮಯದಲ್ಲಿ ಏಕಾಏಕಿ ಸಿಲಿಂಡರ್​ ಪೈಪ್​ನಲ್ಲಿ ಗ್ಯಾಸ್​ ಸೋರಿಕೆಯಿಂದ ಬೆಂಕಿ ಕಾಣಿಸಿಕೊಂಡಿತ್ತು. ಈ ವೇಳೆ, ಸಿಬ್ಬಂದಿ ಹಾಗೂ ಸ್ಥಳದಲ್ಲಿದ್ದವರ ಸಮಯ ಪ್ರಜ್ಞೆಯಿಂದಾಗಿ ಭಾರಿ ಅನಾಹುತ ತಪ್ಪಿದೆ.

ಕೂಡಲೇ ಸಿಬ್ಬಂದಿ ಬೆಂಕಿ ತಗುಲಿದ ಸಿಲಿಂಡರ್​​ ಅನ್ನು ಶಾಲಾ ಕಟ್ಟಡದಿಂದ ಹೊರ ತಂದು ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ರಸ್ತೆ ದುರಸ್ತಿ ಮಾಡುವ ಪುಟಾಣಿಗಳ ಫೋಟೋ ವೈರಲ್​.. ಕೂಡಲೇ ಮಾರ್ಗ ಸರಿಪಡಿಸುವಂತೆ ನ್ಯಾಯಾಧೀಶರ ತಾಕೀತು

Last Updated : Oct 25, 2021, 7:51 PM IST

ABOUT THE AUTHOR

...view details