ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ವೀರಕಂಭ ಎಂಬಲ್ಲಿ ವಾಣಿಜ್ಯ ಕಟ್ಟಡಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದೆ.
ವಿಟ್ಲ ವೀರಕಂಭ ಬಳಿ ವಾಣಿಜ್ಯ ಕಟ್ಟಡಕ್ಕೆ ಬೆಂಕಿ - magalore news
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ವೀರಕಂಭ ಎಂಬಲ್ಲಿ ವಾಣಿಜ್ಯ ಕಟ್ಟಡಕ್ಕೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದೆ.
fire-to-commercial-building-at-magalore
ವೀರಕಂಭದ ಹಮೀದ್ ಎಂಬವರ ವಾಣಿಜ್ಯ ಕಟ್ಟಡ ಹಾಗೂ ಮನೆ ಇದ್ದು ವಾಣಿಜ್ಯ ಮಳಿಗೆಗೆ ಬೆಂಕಿ ಹತ್ತಿಕೊಂಡಿದೆ. ವಾಣಿಜ್ಯ ಕಟ್ಟಡಕ್ಕೆ ಬೆಂಕಿ ಬಿದ್ದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ನೀಡಲಾಗಿದ್ದು ತಕ್ಷಣವೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ.
ಮನೆಯಲ್ಲಿದ್ದವರು ಬೆಂಕಿಯಿಂದ ಪಾರಾಗಿದ್ದು ವಾಣಿಜ್ಯ ಕಟ್ಟಡಕ್ಕೆ ಬೆಂಕಿ ತಗುಲಿದ ಪರಿಣಾಮ ಅಪಾರ ಪ್ರಮಾಣದಲ್ಲಿ ನಷ್ಟವಾಗಿದೆ.