ಕರ್ನಾಟಕ

karnataka

ETV Bharat / state

12 ದಿನದ ಬಳಿಕ ದ.ಕ. ಜಿಲ್ಲೆಯಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್​ ಪತ್ತೆ: ಸಚಿವ ಪೂಜಾರಿ - mangalore news

ಪುತ್ತೂರು ತಾಲೂಕಿನ ಉಪ್ಪಿನಂಗಡಿಯ 39 ವರ್ಷದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಮಾ.28 ರಂದು ದೆಹಲಿಯಿಂದ ಬಂದಿರುವ ವ್ಯಕ್ತಿಯಲ್ಲಿ ಕೊರೊನಾ ಕಂಡುಬಂದಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್​ ಪೂಜಾರಿ ತಿಳಿಸಿದ್ದಾರೆ.

mangalore
ಸಚಿವ ಪೂಜಾರಿ

By

Published : Apr 17, 2020, 3:10 PM IST

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 12 ದಿನಗಳ ಬಳಿಕ ವ್ಯಕ್ತಿಯೊಬ್ಬನಲ್ಲಿ ಕೊರೊನಾ ದೃಢಪಟ್ಟಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಪುತ್ತೂರು ತಾಲೂಕಿನ ಉಪ್ಪಿನಂಗಡಿಯ 39 ವರ್ಷದ ವ್ಯಕ್ತಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಮಾ.28 ರಂದು ದೆಹಲಿಯಿಂದ ಬಂದಿರುವ ವ್ಯಕ್ತಿಗೆ ಕೊರೊನಾ ದೃಢಪಟ್ಟಿದೆ.

ಕೊರೊನಾ ಪಾಸಿಟಿವ್​ ಕೇಸ್​ ಕುರಿತು ಸಚಿವ ಪೂಜಾರಿ ಮಾಹಿತಿ

ಇವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 13 ಪ್ರಕರಣಗಳು ದೃಢಪಟ್ಟಿದ್ದು 9 ಮಂದಿ ಗುಣಮುಖರಾಗಿದ್ದಾರೆ. ಇಂದು ಕೊರೊನಾ ದೃಢಪಟ್ಟ ವ್ಯಕ್ತಿ ಸೇರಿದಂತೆ 4 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ABOUT THE AUTHOR

...view details