ಕರ್ನಾಟಕ

karnataka

5 ಕಾಗೆಗಳು ಸಾವು : ಮಂಜನಾಡಿ ಅರಂಗಡಿ ಗ್ರಾಮದಲ್ಲಿ ಹಕ್ಕಿ ಜ್ವರದ ಆತಂಕ

ಮಂಗಳೂರಿನ ಮಂಜನಾಡಿ ಗ್ರಾಮದ ಅರಂಗಡಿ ಪ್ರದೇಶದಲ್ಲಿ 5 ಕಾಗೆಗಳು ಸತ್ತು ಬಿದ್ದಿರುವುದು ಕಂಡು ಬಂದಿದ್ದು, ಸ್ಥಳಕ್ಕೆ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಸ್ಥಳೀಯ ಗ್ರಾಮ ಪಂಚಾಯತ್​ ಅಭಿವೃದ್ಧಿ ಅಧಿಕಾರಿ ಭೇಟಿ ನೀಡಿ ಪರಿಶೀಲಿನೆ ನಡೆಸಿದರು.

By

Published : Jan 7, 2021, 1:23 AM IST

Published : Jan 7, 2021, 1:23 AM IST

Anxiety of bird flu in Manjanadi Aranadi village
ಮಂಜನಾಡಿ ಅರಂಗಡಿ ಗ್ರಾಮದಲ್ಲಿ ಹಕ್ಕಿ ಜ್ವರದ ಆತಂಕ

ಉಳ್ಳಾಲ (ದಕ್ಷಿಣ ಕನ್ನಡ) :ಮಂಜನಾಡಿ ಗ್ರಾಮದಲ್ಲಿ ಕಾಗೆಗಳು ಸತ್ತುಬಿದ್ದಿರುವುದು ಕಂಡು ಬಂದ ಹಿನ್ನೆಲೆ ಹಕ್ಕಿ ಜ್ವರದ ಆತಂಕ ಶುರುವಾಗಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ.

ಮಂಜನಾಡಿ ಗ್ರಾಮದ ಅರಂಗಡಿ ಪ್ರದೇಶದಲ್ಲಿ 5 ಕಾಗೆಗಳು ಸತ್ತು ಬಿದ್ದಿರುವುದು ಕಂಡು ಬಂದಿದೆ. ಸ್ಥಳಕ್ಕೆ ನಾಟೆಕಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಹಾಗೂ ಸ್ಥಳೀಯ ಗ್ರಾಮ ಪಂಚಾಯತ್​ ಅಭಿವೃದ್ಧಿ ಅಧಿಕಾರಿ ಭೇಟಿ ನೀಡಿ ಪರಿಶೀಲಿಲನೆ ನಡೆಸಿದ್ದಾರೆ. ಕಾಗೆಗಳ ಕಳೆಬರವನ್ನು ಕೂಡಲೇ ಗುಂಡಿ ತೋಡಿ ಹೂಳಲು ಅಧಿಕಾರಿಗಳು ನಿರ್ದೇಶಿಸಿದ್ದು, ಸುತ್ತಲಿನ ಪ್ರದೇಶದಲ್ಲಿ ಕೀಟನಾಶಕ ಸಿಂಪಡಿಸಲು ಸೂಚಿಸಿದ್ದಾರೆ.

ಓದಿ : ಹಕ್ಕಿಜ್ವರ... ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹೈ ಅಲರ್ಟ್

ಜ.5 ರಂದು ಪಶುಸಂಗೋಪನೆ ವೈದ್ಯಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ, ಒಂದು ಕಾಗೆಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ. ಮಂಜನಾಡಿ ಗ್ರಾಮದಲ್ಲಿ 10,401 ಜನ ಸಂಖ್ಯೆ ಇದ್ದು, ಈಗಾಗಲೇ ಆಶಾ ಕಾರ್ಯಕರ್ತೆಯರು ಹಾಗೂ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರಿಂದ ಮನೆ ಮನೆ ಸಮೀಕ್ಷೆ ನಡೆಸಲಾಗಿದೆ. ಇದುವರೆಗೆ ಯಾವುದೇ ರೋಗದ ಲಕ್ಷಣಗಳು ಕಂಡು ಬಂದಿಲ್ಲ. ಕರಪತ್ರಗಳ ಮೂಲಕ ಮುನ್ನೆಚ್ಚರಿಕಾ ಕ್ರಮದ ಬಗ್ಗೆ ಜಾಗೃತಿ ಮೂಡಿಸಲಾಗಿದೆ.

ಪ್ರತಿನಿತ್ಯ ಸ್ಥಳಕ್ಕೆ ಭೇಟಿ ನೀಡಿ ಕಾಲ ಕಾಲಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಲು ವೈದ್ಯಾಧಿಕಾರಿಗೆ ಸೂಚಿಸಲಾಗಿದೆ. ಪಶುಸಂಗೋಪನಾ ವೈದ್ಯಾಧಿಕಾರಿ ಹಾಗೂ ಉಪನಿರ್ದೇಶಕರ ಜೊತೆಗೆ ಚರ್ಚಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details