ಕರ್ನಾಟಕ

karnataka

ETV Bharat / state

ವಿದ್ಯಾರ್ಥಿಗಳ ಕಿಸ್ಸಿಂಗ್ ಪ್ರಕರಣ: ಅಗತ್ಯ ಬಿದ್ದಾಗ ತನಿಖೆಗೆ ಹಾಜರಾಗಿ ಎಂದು ಸೂಚಿಸಿದ ಬಾಲ ನ್ಯಾಯಾಲಯ - ಪೋಷಕರ ವಶಕ್ಕೆ ಐವರು ವಿದ್ಯಾರ್ಥಿಗಳು

ಕಿಸ್ಸಿಂಗ್ ಮಾಡಿ ಅನುಚಿತವಾಗಿ ವರ್ತಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ವಿದ್ಯಾರ್ಥಿಗಳು ಇಂದು ಬಾಲ ನ್ಯಾಯಾಲಯದ ಮುಂದೆ ಹಾಜರಾಗಿದ್ದರು.

ವಿದ್ಯಾರ್ಥಿಗಳ ಕಿಸ್ಸಿಂಗ್ ಪ್ರಕರಣ
ವಿದ್ಯಾರ್ಥಿಗಳ ಕಿಸ್ಸಿಂಗ್ ಪ್ರಕರಣ

By

Published : Jul 22, 2022, 9:57 PM IST

ಮಂಗಳೂರು: ನಗರದ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ ಕಿಸ್ಸಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸರು ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರಿನ ಕಾಲೇಜಿನ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರನ್ನು ತಾವು ವಾಸವಿದ್ದ ರೂಂಗೆ ಕರೆಸಿಕೊಂಡು ಟ್ರುತ್ ಅಂಡ್​​ ಡೇರ್ ಗೇಮ್ ಆಡಿ ವಿದ್ಯಾರ್ಥಿನಿಯರ ಜೊತೆಗೆ ಕಿಸ್ಸಿಂಗ್ ಮಾಡಿ ಅನುಚಿತವಾಗಿ ವರ್ತಿಸಿದ್ದರು. ಇದರ ವಿಡಿಯೋ ನಿನ್ನೆ ವೈರಲ್ ಆಗಿತ್ತು. ಈ ಬಗ್ಗೆ ಮಂಗಳೂರು ನಗರ ಪೊಲೀಸರು ಮೂರು ಪ್ರತ್ಯೇಕ ಪೋಕ್ಸೋ ಪ್ರಕರಣ ದಾಖಲಿಸಿದ್ದರು.

ಪ್ರಕರಣ ಸಂಬಂಧ ಐವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ಬಾಲ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು. ಈನ ಬಗ್ಗೆ ವಿಚಾರಣೆ ನಡೆಸಿದ ಬಾಲ ನ್ಯಾಯಾಲಯವು ವಿದ್ಯಾರ್ಥಿಗಳನ್ನು ಹೆತ್ತವರ ಕಸ್ಟಡಿಗೆ ನೀಡಿದ್ದು, ಅಗತ್ಯ ಬಿದ್ದಾಗ ತನಿಖಾಧಿಕಾರಿ ಮುಂದೆ ಹಾಜರಾಗಲು ಸೂಚಿಸಿದೆ.

ಇದನ್ನೂ ಓದಿ:ಡಿಕ್ಕಿ ಹೊಡೆದು ಆಟೋ ಮೇಲೆ ಉರುಳಿ ಬಿದ್ದ ಟ್ರಕ್​: ಇಬ್ಬರು ಮಹಿಳೆಯರು ಸೇರಿ 7 ಜನರ ದುರ್ಮರಣ

ABOUT THE AUTHOR

...view details