ಮಂಗಳೂರು:ಕೊರೊನಾ ಭೀತಿಯಿಂದ ಸ್ಥಗಿತಗೊಂಡಿದ್ದ ವಿಮಾನಯಾನ ಸೇವೆ ಆರಂಭ ಮಾಡಲು ಕೇಂದ್ರ ವಿಮಾನಯಾನ ಸಚಿವಾಲಯ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಇಂದಿನಿಂದ ಮಂಗಳೂರಿನಿಂದ ದೇಶೀಯ ವಿಮಾನ ಸೇವೆ ಆರಂಭವಾಗಿದೆ.
ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಂಗಳೂರು, ಮುಂಬೈ, ಚೆನ್ನೈಗೆ ಸ್ಪೈಸ್ ಜೆಟ್ ಮತ್ತು ಇಂಡಿಗೋ ವಿಮಾನಯಾನ ಸೇವೆ ಆರಂಭಿಸಿವೆ. ಇಂಡಿಗೋದ 3 ವಿಮಾನ ಮುಂಬೈ, ಬೆಂಗಳೂರು, ಚೆನ್ನೈ ಗೆ ಹಾರಲಿದ್ದು, ಸ್ಪೈಸ್ ಜೆಟ್ನ 3 ವಿಮಾನಗಳು ಬೆಂಗಳೂರು, ಮುಂಬೈಗೆ ಪ್ರಯಾಣ ಬೆಳೆಸಲಿವೆ.
ಇಂದು ಬೆಂಗಳೂರಿನಿಂದ ಸ್ಪೈಸ್ ಜೆಟ್ ವಿಮಾನ ಬೆಳಗ್ಗೆ 8.30ಕ್ಕೆ ಮಂಗಳೂರಿಗೆ ಆಗಮಿಸಿದೆ. ರಾತ್ರಿ 7 ಗಂಟೆಗೆ ಮತ್ತು ಇಂಡಿಗೋ ವಿಮಾನ ಸಂಜೆ 5.55ಕ್ಕೆ ಮಂಗಳೂರಿನಲ್ಲಿ ಲ್ಯಾಂಡ್ ಆಗಲಿವೆ. ಮಂಗಳೂರಿನಿಂದ ಬೆಂಗಳೂರಿಗೆ ಸ್ಪೈಸ್ ಜೆಟ್ ಬೆಳಗ್ಗೆ 10.20ಕ್ಕೆ ಪ್ರಯಾಣ ಬೆಳೆಸಿದೆ. ರಾತ್ರಿ 9.35ಕ್ಕೆ ಹಾಗೂ ಇಂಡಿಗೋ ವಿಮಾನ ಸಂಜೆ 7.30ಕ್ಕೆ ಸಂಚರಿಸಲಿವೆ.
ಮುಂಬೈನಿಂದ ಸ್ಪೈಸ್ ಜೆಟ್ ವಿಮಾನ ಬೆಳಗ್ಗೆ 7.05 ಕ್ಕೆ, ಇಂಡಿಗೋ ಬೆಳಗ್ಗೆ 9.30ಕ್ಕೆ ಮಂಗಳೂರಿಗೆ ಹೊರಡಲಿವೆ. ಮಂಗಳೂರಿನಿಂದ ಮುಂಬೈಗೆ ಸ್ಪೈಸ್ ಜೆಟ್ ವಿಮಾನ ಬೆಳಗ್ಗೆ 9.05ಕ್ಕೆ ಹೊರಟಿದೆ. ಇಂಡಿಗೋ 11.40ಕ್ಕೆ ತೆರಳಲಿದೆ. ಚೆನ್ನೈನಿಂದ ಮಂಗಳೂರಿಗೆ ಸಂಜೆ 5.45ಕ್ಕೆ ಹಾಗೂ ಮಂಗಳೂರಿನಿಂದ ಚೆನ್ನೈಗೆ ರಾತ್ರಿ 8.05ಕ್ಕೆ ಇಂಡಿಗೋ ವಿಮಾನ ಸಂಚರಿಸಲಿದೆ.