ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಸೆನ್ ಅಪರಾಧ ವಿಭಾಗದ ಪೊಲೀಸರು ವಿದೇಶಿ ಪ್ರಜೆಯನ್ನು ಬಂಧಿಸಿದ್ದಾರೆ. ಮೂಲತಃ ರಿಪಬ್ಲಿಕ್ ಆಫ್ ಸೌತ್ ಸೂಡನ್‌ನ ಪ್ರಜೆ ಲೂಯಲ್ ಡೇನಿಯಲ್ ಜಸ್ಟೀನ್ ಬೌಲೋ ಯಾನೆ ಡ್ಯಾನಿ ಬಂಧಿತ ಆರೋಪಿ.
ಆರೋಪಿಯು ಹಾಲಿ ಬೆಂಗಳೂರು ನಗರದ ಗುಂಜೂರು ಪಾಳ್ಯದಲ್ಲಿ ವಾಸ್ತವ್ಯವಿದ್ದ. ಜೂನ್ 15ರಂದು ಸಿಸಿಬಿ ಪೊಲೀಸರು ಎಂಡಿಎಂಎ ಮಾರಾಟ ಪ್ರಕರಣ ಸಂಬಂಧಿಸಿದಂತೆ ಪಡೀಲ್ ಬಳಿ ಕಾರ್ಯಾಚರಣೆ ನಡೆಸಿ ಓರ್ವ ಮಹಿಳೆ ಸೇರಿದಂತೆ ನಾಲ್ವರನ್ನು ಬಂಧಿಸಿದ್ದರು. ಇವರಿಂದ 125 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿತ್ತು.