ಕರ್ನಾಟಕ

karnataka

ETV Bharat / state

ಅರಣ್ಯಾಧಿಕಾರಿಗಳಿಂದ ದಾಂಧಲೆ ಆರೋಪ.. ಪ್ರಕರಣ ದಾಖಲಿಸುವಂತೆ ನ್ಯಾಯಾಲಯ ಆದೇಶ - ಅರಣ್ಯಾಧಿಕಾರಿಗಳಿಂದ ದಾಂಧಲೆ

ಯಾವುದೇ ಅಧಿಕಾರಿಯಾಗಲಿ, ಜನಪ್ರತಿನಿಧಿಗಳಾಗಲಿ ಸಂತ್ರಸ್ಥರ ನೆರವಿಗೆ ಬಾರದಿದ್ದರೂ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಕೆಯಾಗಿತ್ತು. ಇದನ್ನು ಸ್ವೀಕರಿಸಿದ ನ್ಯಾಯಾಲಯ ದೌರ್ಜನ್ಯವೆಸಗಿದ ಅರಣ್ಯಾಧಿಕಾರಿಗಳ ವಿರುದ್ದ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ.

ನ್ಯಾಯಾಲಯ
ನ್ಯಾಯಾಲಯ

By

Published : Mar 21, 2021, 5:20 AM IST

ಕಡಬ:ಅರಣ್ಯಾಧಿಕಾರಿಗಳು ಮಧ್ಯ ರಾತ್ರಿ ದಾಳಿ ನೆಪದಲ್ಲಿ ದಾಂಧಲೆ ನಡೆಸಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರಣ್ಯಾಧಿಕಾರಿಗಳು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸುವಂತೆ ಪುತ್ತೂರು ನ್ಯಾಯಾಲಯ ಪೊಲೀಸರಿಗೆ ನಿರ್ದೇಶನ ನೀಡಿದೆ.

ಸುಬ್ರಹ್ಮಣ್ಯ ವಲಯದ ಐತ್ತೂರು ರಕ್ಷಿತಾರಣ್ಯದಿಂದ ಬಾರಿ ಬೆಲೆ ಬಾಳುವ ಮರಗಳ ಲೂಟಿಯಾಗುತ್ತಿದೆ ಎಂದು ದೂರು ನೀಡಿದ ಐತ್ತೂರು ಗ್ರಾಮದ ಮೂಜೂರು ನಿವಾಸಿ ಪ್ರಸಾದ್ ಎಂಬವರ ಮನೆಗೆ ಅರಣ್ಯಾಧಿಕಾರಿಗಳು ಮಧ್ಯ ರಾತ್ರಿ ದಾಳಿ ನೆಪದಲ್ಲಿ ದಾಂಧಲೆ ನಡೆಸಿ ದ್ವೇಷ ಸಾಧಿಸಿದ್ದಾರೆ. ಈ ಸಂಬಂಧ ಅರಣ್ಯಾಧಿಕಾರಿಗಳು ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಬೇಕೆಂದು ಅಗ್ರಹಿಸಿ ದೂರುದಾರ ಮನೆಯವರು ಕಳೆದ ಆರು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.

ಈ ಸಂಬಂಧ ಯಾವುದೇ ಅಧಿಕಾರಿಯಾಗಲಿ, ಜನಪ್ರತಿನಿಧಿಗಳಾಗಲಿ ಸಂತ್ರಸ್ಥರ ನೆರವಿಗೆ ಬಾರದಿದ್ದರಿಂದ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಕೆಯಾಗಿತ್ತು. ಇದನ್ನು ಸ್ವೀಕರಿಸಿದ ನ್ಯಾಯಾಲಯ ದೌರ್ಜನ್ಯವೆಸಗಿದ ಅರಣ್ಯಾಧಿಕಾರಿಗಳ ವಿರುದ್ದ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ನಿರ್ದೇಶನ ನೀಡಿದೆ.

ಇದನ್ನೂ ಓದಿ..ಅರಣ್ಯಾಧಿಕಾರಿಗಳಿಂದ ದೌರ್ಜನ್ಯ: ಕಡಬ ತಹಶೀಲ್ದಾರ್ ಕಚೇರಿ ಮುಂದೆ ಕುಟುಂಬದಿಂದ ಸತ್ಯಾಗ್ರಹ

ABOUT THE AUTHOR

...view details