ಬೆಳ್ತಂಗಡಿ (ದಕ್ಷಿಣ ಕನ್ನಡ):ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಶನಿವಾರ ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿದ್ದಾರೆ. ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಧರ್ಮಸ್ಥಳದಲ್ಲಿ ರಾತ್ರಿ ವಾಸ್ತವ್ಯ ಹೂಡಿದ್ದು, ಇಂದು (ಭಾನುವಾರ) ಮುಂಜಾನೆ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.
ಬಳಿಕ ಹೆಚ್‌ಡಿಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಹೆಗ್ಗಡೆಯವರು ಮಾಜಿ ಮುಖ್ಯಮಂತ್ರಿಗಳನ್ನು ಕ್ಷೇತ್ರದ ಪರವಾಗಿ ಗೌರವಿಸಿದರು. ದೇವರ ದರ್ಶನ ಪಡೆದು ಹೊರಬರುವ ವೇಳೆ ಅಲ್ಲಿ ನೆರೆದಿದ್ದ ಭಕ್ತರು, ಜೆಡಿಎಸ್ ಬೆಂಬಲಿಗರು ಹೆಚ್‌ಡಿಕೆ ಅವರಿಗೆ ಜೈಕಾರ ಹಾಕಿ ಹಸ್ತಲಾಘವ ಮಾಡಿದರು.
ನಂತರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿ, "ಮುಂದಿನ ದಿನಗಳಲ್ಲಿ ಧರ್ಮಸ್ಥಳದ ಮಂಜುನಾಥ ಸ್ವಾಮಿ ಹಾಗೂ ದುರ್ಗಾಪರಮೇಶ್ವರೀ ತಾಯಿಯ ಆಶೀರ್ವಾದದಿಂದ ರಾಜ್ಯದಲ್ಲಿ ಸುಸ್ಥಿರ ಆಡಳಿತ ಬರುವಂತೆ ಹಾಗೂ ದೇವರ ಅನುಗ್ರಹದಿಂದ ನಾಡಿನ ಜನತೆಗೆ ಒಳಿತಾಗಲಿ ಎಂದು ವಿಶೇಷ ಹೋಮ ಹವನ, ಪೂಜೆ ಮಾಡಿದ್ದೇನೆ. ಪಕ್ಷದ ಮತ್ತು ಎಲ್ಲ ವಿಚಾರಗಳ ಬಗ್ಗೆಯೂ ಸಂಕಲ್ಪ ಮಾಡಿದ್ದೇನೆ" ಎಂದರು.
ಇದನ್ನೂ ಓದಿ:ಶೆಟ್ಟರ್, ಸವದಿಯಂತಹ ಹತ್ತು ನಾಯಕರನ್ನು ಸೃಷ್ಟಿಸುವ ಶಕ್ತಿ ಬಿಜೆಪಿಗಿದೆ: ರಮೇಶ್ ಜಾರಕಿಹೊಳಿ