ಮಂಗಳೂರು:ಅನಾರೋಗ್ಯದಿಂದ ಬಳಲುತ್ತಿದ್ದ ಮಂಗಳೂರು ಮಹಾನಗರ ಪಾಲಿಕೆಯ ಕುಂಜತ್ ಬೈಲ್ ದಕ್ಷಿಣ ವಾರ್ಡ್ನ ಮಾಜಿ ಕಾರ್ಪೊರೇಟರ್ ಮಧುಕಿರಣ್ (43) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ಮಧುಕಿರಣ್ ನಿಧನ
ಮಂಗಳೂರು ಮಹಾನಗರ ಪಾಲಿಕೆಯ ಕುಂಜತ್ ಬೈಲ್ ದಕ್ಷಿಣ ವಾರ್ಡ್ನ ಮಾಜಿ ಕಾರ್ಪೊರೇಟರ್ ಮಧುಕಿರಣ್(43) ಇಂದು ಮುಂಜಾನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಕಾರ್ಪೊರೇಟರ್ ಮಧುಕಿರಣ್ ನಿಧನ
ಮಧುಕಿರಣ್ ಕಳೆದ ನಾಲ್ಕು ತಿಂಗಳಿನಿಂದ ತೀವ್ರ ಅನಾರೋಗ್ಯಕ್ಕೆ ಒಳಗಾಗಿದ್ದ ಹಿನ್ನೆಲೆಯಲ್ಲಿ ಒಂದು ತಿಂಗಳಿನಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 3:30ಕ್ಕೆ ಮೃತಪಟ್ಟಿದ್ದಾರೆ.
ಬಿಜೆಪಿಯ ಮಧುಕಿರಣ್ ಮಂಗಳೂರು ಮಹಾನಗರ ಪಾಲಿಕೆಯ ಕುಂಜತ್ತಬೈಲ್ ದಕ್ಷಿಣ ವಾರ್ಡಿನಿಂದ ಎರಡು ಬಾರಿ ಚುನಾಯಿತರಾಗಿದ್ದರು. ನ್ಯಾಯವಾದಿ ಪತ್ನಿ, ಇಬ್ಬರು ಪುತ್ರಿಯರ ಸಹಿತ ಅಪಾರ ಬಂಧು-ಮಿತ್ರರನ್ನು ಅವರು ಅಗಲಿದ್ದಾರೆ.