ಕರ್ನಾಟಕ

karnataka

ಪಾಕ್ ಪರ ಘೋಷಣೆ ಪ್ರಕರಣ: ಪೊಲೀಸರ ಕ್ರಮ ಖಂಡನೀಯ ಎಂದ ಮಾಜಿ ಮೇಯರ್​​

By

Published : Jan 3, 2021, 3:19 AM IST

ಗ್ರಾಮ ಪಂಚಾಯಿತಿ ಚುನಾವಣಾ ಫಲಿತಾಂಶದ ವೇಳೆ ಪಾಕ್​ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಮಾಜಿ ಮೇಯರ್ ಕೆ.ಅಶ್ರಫ್​ ಪ್ರತಿಕ್ರಿಯೆ ನೀಡಿದ್ದಾರೆ.

k.ashraf
ಕೆ.ಅಶ್ರಫ್​

ಮಂಗಳೂರು:ಎಸ್​ಡಿಪಿಐ ಪಕ್ಷದ ಕಾರ್ಯಕರ್ತರು ಗ್ರಾಮ ಪಂಚಾಯತ್ ಚುನಾವಣೆ ಗೆಲುವಿನ ಸಂದರ್ಭದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾರೆಂದು ಕೆಲವು ಯುವಕರನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಯಾವುದೇ ರೀತಿಯಲ್ಲಿ ತನಿಖೆ ನಡೆಸದೆ ಪೊಲೀಸರು ಅಮಾಯಕರನ್ನು ಬಂಧಿಸಿರುವುದು ಖಂಡನೀಯ ಎಂದು ಮಾಜಿ ಮೇಯರ್ ಕೆ.ಅಶ್ರಫ್ ಆಗ್ರಹಿಸಿದ್ದಾರೆ.

ಪೊಲೀಸರು ಈ ಪ್ರಕರಣದ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸದೆ ಅಮಾಯಕ ಯುವಕರನ್ನು ಬಂಧಿಸಿರುವುದು ಖಂಡನೀಯ. ಸಾಮಾಜಿಕ ತಾಣಗಳಲ್ಲಿ ಈ ಬಗ್ಗೆ ಪರ-ವಿರೋಧ ಚರ್ಚೆಗಳೂ ನಡೆಯುತ್ತಿದೆ. ಘಟನೆಯ ಸತ್ಯಾಸತ್ಯತೆ ಬಗ್ಗೆ ಪೊಲೀಸರು ಸಾರ್ವಜನಿಕರಿಗೆ ನೈಜ ಮಾಹಿತಿ ತಿಳಿಸದೇ ಇದ್ದದ್ದು ವ್ಯಾಪಕ ಸಂಶಯಕ್ಕೆ ಎಡೆಮಾಡಿ ಕೊಟ್ಟಿದೆ ಎಂದು ಅಶ್ರಫ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಬಂಧಿತರ ಬಿಡುಗಡೆಯಾಗದಿದ್ದರೆ ಎಸ್​ಪಿ ಕಚೇರಿಗೆ ಮುತ್ತಿಗೆ : ಎಸ್​ಡಿಪಿಐ ಮುಖಂಡರಿಂದ ಎಚ್ಚರಿಕೆ

ಪಾಕಿಸ್ತಾನಕ್ಕೆ ಝಿಂದಾಬಾದ್ ಕೂಗಿದ್ದೇ ಅದರೆ ಅದು ಖಂಡನೀಯ. ಘೋಷಣೆ ಕೂಗಿದವರನ್ನು ಕಾನೂನಿನ ಪ್ರಕಾರ ಶಿಕ್ಷಿಸಬೇಕಿದೆ. ಉಜಿರೆಯಲ್ಲಿ ಪಾಕಿಸ್ತಾನಕ್ಕೆ ಜಿಂದಾಬಾದ್ ಘೋಷಣೆ ಮೊಳಗಿಸಿದ ಒರಿಜಿನಲ್ ವಿಡಿಯೋವನ್ನು ಪೊಲೀಸರು ಸಾರ್ವಜನಿಕರ ಮುಂದೆ ಇಡಬೇಕಾಗಿದೆ. ಸುಳ್ಳು ಪ್ರಕರಣ ದಾಖಲಿಸಿ, ದೌರ್ಜನ್ಯ ನಡೆಸದೇ ನಿಸ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಅಶ್ರಫ್ ಆಗ್ರಹಿಸಿದ್ದಾರೆ.

ABOUT THE AUTHOR

...view details