ಮಂಗಳೂರು: ದೇಶದಾದ್ಯಂತ ಲಾಕ್ ಡೌನ್ ಹಿನ್ನೆಲೆ ಜಿಲ್ಲೆಯ ವಿವಿಧೆಡೆ ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಕೆಲಸಗಳನ್ನು ಮಾಡುತ್ತಿದ್ದ ಕಾರ್ಮಿಕರು ಕೂಲಿಯೂ ಇಲ್ಲದೇ, ಹೊಟ್ಟೆಗೆ ಕೂಳೂ ಇಲ್ಲದೆ ಸಂಕಷ್ಟಕ್ಕೆ ಸಿಲಕಿದ್ದು, ಸರ್ಕಾರ ತಕ್ಷಣ ಇವರ ನೆರವಿಗೆ ಬರುವಂತೆ ಮಾಜಿ ಸಚಿವ ಅಭಯಚಂದ್ರ ಜೈನ್ ಮನವಿ ಮಾಡಿದ್ದಾರೆ.
ಸಂಕಷ್ಟದಲ್ಲಿರುವ ಕಾರ್ಮಿಕರ ನೆರವಿಗೆ ಬನ್ನಿ: ಸಿಎಂಗೆ ಮಾಜಿ ಸಚಿವರ ಮನವಿ - former minister appeals to CM
ಲಾಕ್ ಡೌನ್ ಹಿನ್ನೆಲೆ ರಾಜ್ಯದ ವಿವಿಧೆಡೆಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕೆಲಸಕ್ಕೆಂದು ಬಂದಿದ್ದ ಕಾರ್ಮಿಕರು ತಮ್ಮ ಊರಿಗೆ ಹಿಂದಿರುಗಲಾಗದೇ ಸಂಕಷ್ಟಕ್ಕೆ ಸಿಲುಕಿದ್ದು, ಹೀಗಾಗಿ ಅವರಿಗೆ ಊರಿಗೆ ತೆರಳಲು ಸರ್ಕಾರ ವ್ಯವಸ್ಥೆ ಕಲ್ಪಿಸಿಕೊಡಬೇಕೆಂದು ಮಾಜಿ ಸಚಿವ ಅಭಯ ಚಂದ್ರ ಜೈನ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ
ಮಾಜಿ ಸಚಿವ ಅಭಯ ಚಂದ್ರ ಜೈನ್
ಸುಮಾರು 200ಕ್ಕೂ ಅಧಿಕ ಕಾರ್ಮಿಕರನ್ನು ಮೂಡಬಿದಿರೆಯಲ್ಲಿ ಪೊಲೀಸರು ತಡೆದಿದ್ದಾರೆ. ಇವರಿಗೆ ರಾತ್ರಿ ತಂಗಲು ಮಾಜಿ ಸಚಿವ ಅಭಯಚಂದ್ರ ಜೈನ್ ನೇತೃತ್ವದಲ್ಲಿ ಜೈನ ಮಂದಿರ ಹಾಗೂ ವಿವಿಧೆಡೆ ವ್ಯವಸ್ಥೆ ಮಾಡಿಕೊಡಲಾಗಿದೆ. ಆದರೆ, ಕಾರ್ಮಿಕರು ತಮ್ಮ ತಮ್ಮ ಊರುಗಳಿಗೆ ಹೋಗುವುದಾಗಿ ಪಟ್ಟು ಹಿಡಿದ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ದೂರವಾಣಿ ಕರೆ ಮಾಡಿದ ಅಭಯಚಂದ್ರ ಜೈನ್, ಕಾರ್ಮಿಕರ ನಿರ್ಗಮನಕ್ಕೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.