ಬಂಟ್ವಾಳ (ದಕ್ಷಿಣ ಕನ್ನಡ):ತಾಲೂಕಿನ ಬಿ.ಸಿ.ರೋಡಿನ ಮಿನಿವಿಧಾನಸೌಧದಲ್ಲಿ ಕಾರ್ಯಾಚರಿಸುವ ಆಧಾರ್ ಕಾರ್ಡ್ ನೋಂದಣಿ ಮತ್ತು ತಿದ್ದುಪಡಿಯಲ್ಲಿ ಸಾರ್ವಜನಿಕರಿಗಾಗುತ್ತಿರುವ ಸಮಸ್ಯೆಯ ಹಿನ್ನಲೆಯಲ್ಲಿ ಮಾಜಿ ಸಚಿವ ರಮಾನಾಥ ರೈ ಅವರು ಬಂಟ್ವಾಳ ಮಿನಿವಿಧಾನಸೌಧಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಆಧಾರ್ ನೋಂದಣಿ ತೊಂದರೆ: ಕ್ರಮಕ್ಕೆ ರಮಾನಾಥ ರೈ ಒತ್ತಾಯ - ಬಿ.ಸಿ.ರೋಡಿನ ಮಿನಿವಿಧಾನಸೌಧ
ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ಆಧಾರ್ ನೋಂದಣಿ, ತಿದ್ದುಪಡಿ ಪ್ರಕ್ರಿಯೆ ವಿಳಂಬವಾಗುತ್ತಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆ ಮಾಜಿ ಸಚಿವ ಬಿ.ರಮಾನಾಥ ರೈ ಬಂಟ್ವಾಳ ಮಿನಿ ವಿಧಾನಸೌಧಕ್ಕೆ ಆಗಮಿಸಿ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಸೂಕ್ತ ಕ್ರಮಕ್ಕೆ ಅವರು ಒತ್ತಾಯಿಸಿದರು.
![ಆಧಾರ್ ನೋಂದಣಿ ತೊಂದರೆ: ಕ್ರಮಕ್ಕೆ ರಮಾನಾಥ ರೈ ಒತ್ತಾಯ](https://etvbharatimages.akamaized.net/etvbharat/prod-images/768-512-8835390-421-8835390-1600342003697.jpg)
ಆಧಾರ್ ಕಾರ್ಡ್ ಅವ್ಯವಸ್ಥೆ ಕುರಿತಾಗಿ ಸಾರ್ವಜನಿಕರಿಂದ ಬಂದ ದೂರಿನನ್ವಯ ತಾಲೂಕು ಕಚೇರಿಗೆ ಭೇಟಿ ನೀಡಿದ್ದಾಗಿ ತಿಳಿಸಿದ ಅವರು, ಈ ಕುರಿತು ಸಂಬಂಧಿಸಿದ ಅಧಿಕಾರಿಗಳ ಜತೆ ಚರ್ಚಿಸಿದರಲ್ಲದೇ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಮಿನಿವಿಧಾನಸೌಧಕ್ಕೆ ರಮಾನಾಥ ರೈ ಭೇಟಿ
ಇದಕ್ಕೆ ಸ್ಪಂದಿಸಿದ ಅಧಿಕಾರಿಗಳು ಕೂಡಲೇ ಸರಿಪಡಿಸುವ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ಭೂ ಬ್ಯಾಂಕ್ ಮಾಜಿ ಅಧ್ಯಕ್ಷ ಸುದರ್ಶನ್ ಜೈನ್, ಬ್ಲಾಕ್ ಕಾಂಗ್ರೆಸ್ ಕೋಶಾಧಿಕಾರಿ ತಿಲಕ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.