ಕರ್ನಾಟಕ

karnataka

ETV Bharat / state

ಚುನಾವಣಾ ರಾಜಕೀಯದಿಂದ ಮಾಜಿ‌ ಸಚಿವ ರಮಾನಾಥ ರೈ ನಿವೃತ್ತಿ ಘೋಷಣೆ

ಚುನಾವಣಾ ರಾಜಕೀಯದಿಂದ ಮಾಜಿ ಸಚಿವ ರಮಾನಾಥ ರೈ ನಿವೃತ್ತಿ ಘೋಷಿಸಿದ್ದಾರೆ.

Former minister B Ramanatha Rai spoke at the press conference.
ಮಾಜಿ ಸಚಿವ ಬಿ ರಮಾನಾಥ ರೈ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

By

Published : May 16, 2023, 3:58 PM IST

Updated : May 16, 2023, 7:32 PM IST

ಮಾಜಿ ಸಚಿವ ಬಿ ರಮಾನಾಥ ರೈ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಮಂಗಳೂರು: ಚುನಾವಣೆ ವೇಳೆ ಹೇಳಿದಂತೆ ತಾನು ಇನ್ನು ಮುಂದೆ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುತ್ತಿದ್ದೇನೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಘೋಷಿಸಿದ್ದಾರೆ.

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಿ ಸೋತ ಬಳಿಕ ನಗರದ ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಚುನಾವಣಾ ರಾಜಕೀಯದಿಂದ ಮಾತ್ರ ದೂರವಿದ್ದು, ಪಕ್ಷದ ಚಟುವಟಿಕೆಯಲ್ಲಿ ಮುಂಚೂಣಿಯಲ್ಲಿರುತ್ತೇನೆ. ಲೋಕಸಭಾ ಚುನಾವಣೆ ಸ್ಪರ್ಧೆಗೆ ಸೂಚಿಸಿದ್ದಲ್ಲಿ ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ತಿಳಿಸಿದರು.

ಚುನಾವಣಾ ರಾಜಕೀಯದಿಂದ ಮಾತ್ರ ದೂರವಿರಲಿದ್ದೇನೆ. ಆದರೆ ಪಕ್ಷ ಎಂಎಲ್​ಸಿ ಸೇರಿದಂತೆ ಇತರ ಅವಕಾಶಗಳನ್ನು ನೀಡಿದ್ದಲ್ಲಿ ಅದನ್ನು ಸ್ವೀಕರಿಸಲು ಸಿದ್ಧನಿದ್ದೇನೆ. ನನಗಿಂತ ಪಕ್ಷ ದೊಡ್ಡದು. ಇಷ್ಟು ವರ್ಷದ ರಾಜಕೀಯ ಜೀವನದಲ್ಲಿ ನಾನು ಪಕ್ಷಕ್ಕೆ ವಿರುದ್ಧವಾಗಿ ಎಂದೂ ನಡೆಡುಕೊಂಡಿಲ್ಲ. ಆದ್ದರಿಂದ ಪಕ್ಷದ ತೀರ್ಮಾನಕ್ಕೆ ಬದ್ಧನಿದ್ಧೇನೆ ಎಂದು ಹೇಳಿದ್ರು.

ಬಂಟ್ವಾಳದಲ್ಲಿ ತನಗೆ ಸಣ್ಣ ಅಂತರದಲ್ಲಿ ಸೋಲಾಗಿದೆ. ಪಕ್ಷದಲ್ಲಿ ನನಗಿಂತಲೂ ಹಿರಿಯರು ಈಗಲೂ ಇದ್ದಾರೆ. ಆದರೆ ನಾನು ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ನಮ್ಮ ಪಕ್ಷದಿಂದಲೇ ಅಪಸ್ವರ ಕೇಳಿ ಬಂದಿತ್ತು. ಆದ್ದರಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ.

ಪಕ್ಷದ ವಿರುದ್ಧ ನಾನು ಈವರೆಗೆ ಯಾವುದೇ ಅಪಸ್ವರ ಎತ್ತಿಲ್ಲ. ಪಕ್ಷದ ಋಣವನ್ನು ಜೀವನ ಪರ್ಯಂತ ತೀರಿಸುತ್ತೇನೆ. ಈ ಬಾರಿಯ ನನ್ನ ಸೋಲಿನ ಅವಲೋಕನವನ್ನು ಮಾಡಿದ್ದೇನೆ. ಚುನಾವಣೆ ನಾವು ಗ್ರಹಿಸಿದ ರೀತಿಯಿಲ್ಲ. ನನಗೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿತ್ತು. ಸಮೀಕ್ಷೆಗಳೂ ಗೆಲ್ಲುವ ರೀತಿಯೇ ಬಂದಿದ್ದವು. ಆದರೆ ಹಿನ್ನಡೆಯಾಗಿದೆ ಎಂದರು.

ನಿವೃತ್ತಿಯಾಗಲು ನಾವು ಬಿಡುವುದಿಲ್ಲ: ಖಾದರ್ನಗರದಲ್ಲಿ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಮಾಜಿ‌ ಸಚಿವ ಯು ಟಿ‌ ಖಾದರ್ ಅವರು ಮಾತನಾಡಿ ರಮಾನಾಥ ರೈ ಅವರನ್ನು ರಾಜಕೀಯದಿಂದ ನಿವೃತ್ತಿಯಾಗಲು ನಾವು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

ರಮಾನಾಥ ರೈ ಅವರು ಅತ್ಯಂತ ಹಿರಿಯ ನಾಯಕರು. ಜಿಲ್ಲೆಯ ಅಭಿವೃದ್ಧಿಗೆ ಅಪಾರ ಕೊಡುಗೆಯನ್ನು ಕೊಟ್ಟವರು. ಅತ್ಯಂತ ಪ್ರಾಮಾಣಿಕ ರಾಜಕೀಯ ಮಾಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಅವರು ನಿವೃತ್ತಿಯಾಗಲು ಜನತೆ ಮತ್ತು ಪಕ್ಷ ಎಂದಿಗೂ ಬಿಡುವುದಿಲ್ಲ. ರಾಜಕೀಯದಲ್ಲಿ ಯಾವಾಗಲೂ ಇರುತ್ತಾರೆ. ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗಲು ನಾವು ಬಿಡುವುದಿಲ್ಲ ಎಂದು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಮೇಲುಗೈ..ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು, ಮಂಗಳೂರು ದಕ್ಷಿಣ, ಮಂಗಳೂರು ಉತ್ತರ, ಬಂಟ್ವಾಳ, ಮೂಡುಬಿದಿರೆ, ಬೆಳ್ತಂಗಡಿ, ಪುತ್ತೂರು, ಸುಳ್ಯ ಸೇರಿದಂತೆ ಒಟ್ಟು 8 ವಿಧಾನಸಭಾ ಕ್ಷೇತ್ರಗಳಿವೆ. ಅವುಗಳಲ್ಲಿ 6 ಸ್ಥಾನಗಳನ್ನು ಬಿಜೆಪಿ ಪಡೆದುಕೊಂಡಿದೆ. 2 ಕ್ಷೇತ್ರ 'ಕೈ' ವಶವಾಗಿವೆ.

ರಮಾನಾಥ್​ ರೈ ವಿರುದ್ಧ ಗೆದ್ದ ರಾಜೇಶ್​ ನಾಯ್ಕ್​ (ಬಂಟ್ವಾಳ):ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್​ ಅಭ್ಯರ್ಥಿ ರಮಾನಾಥ ರೈ ಅವರನ್ನು ಹಿಂದಿಕ್ಕಿ ಬಿಜೆಪಿ ಅಭ್ಯರ್ಥಿ ರಾಜೇಶ್​ ನಾಯ್ಕ್​ ಗೆಲುವಿನ ನಗೆ ಬೀರಿದ್ದಾರೆ. ಭಾರಿ ಪೈಪೋಟಿಯಲ್ಲಿ ಸ್ಪರ್ಧೆ ನಡೆದಿದ್ದು, ರಾಜೇಶ್​ ನಾಯ್ಕ್​ 8 ಸಾವಿರ ಮತಗಳ ಅಂತರದಿಂದ ಗೆದ್ದರು.

ಇದನ್ನೂಓದಿ:2ನೇ ಬಾರಿ ರಾಜಕೀಯ ಜೀವನದಲ್ಲಿ ಸೋತ ಶ್ರೀರಾಮುಲು: ಬೆಂಬಲಿಗರಿಂದ ಕಣ್ಣೀರು

Last Updated : May 16, 2023, 7:32 PM IST

ABOUT THE AUTHOR

...view details