ಬಂಟ್ವಾಳ(ದಕ್ಷಿಣಕನ್ನಡ):ವಲಸೆ ಕಾರ್ಮಿಕರನ್ನ ಊರಿಗೆ ಕಳುಹಿಸಲು ವ್ಯವಸ್ಥೆ ಕಲ್ಪಿಸುವುದಾಗಿ ಮಾಜಿ ಸಚಿವ ರಮಾನಾಥ ರೈ ತಿಳಿಸಿದ್ದಾರೆ.
ವಲಸೆ ಕಾರ್ಮಿಕರನ್ನ ಊರಿಗೆ ಕಳುಹಿಸಲು ವ್ಯವಸ್ಥೆ: ಮಾಜಿ ಸಚಿವ ರಮಾನಾಥ ರೈ - Bantwal Tahsildar Rashmi S. R
ರಾಜ್ಯದೊಳಗಿನ ಕಾರ್ಮಿಕರನ್ನ ಇಂದೇ ಬಸ್ ಮೂಲಕ ಕಳುಹಿಸಿಕೊಡುವುದಾಗಿ ಹಾಗೂ ಉತ್ತರ ಪ್ರದೇಶದ ಕಾರ್ಮಿಕರಿಗೆ ದಿನಸಿ ಸಾಮಾಗ್ರಿ ನೀಡುವುದಾಗಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಅವರಿಗೆ ಮಾಜಿ ಸಚಿವ ರಮಾನಾಥ ರೈ ತಿಳಿಸಿದ್ದಾರೆ.

ಸಲೂನ್ ಮತ್ತಿತರ ಕಡೆಗಳಲ್ಲಿ ಕೆಲಸ ನಿರ್ವಹಿಸಲು ಉತ್ತರ ಪ್ರದೇಶದಿಂದ ಬಂದಿದ್ದ 9 ಮಂದಿ ಕಾರ್ಮಿಕರು, ಕನಪಾಡಿ ಜಾತ್ರೆಗೆ ಆಗಮಿಸಿದ್ದ ಕಾರವಾರದ ದಂಪತಿ ಹಾಗೂ ಕುಷ್ಠಗಿಯ ಓರ್ವ ಕೂಲಿ ಕಾರ್ಮಿಕ ಊರಿಗೆ ಮರಳಲಾಗದೆ ಬಂಟ್ವಾಳದಲ್ಲೇ ಉಳಿದಿದ್ದರು. ಕನಪಾಡಿಯಲಿದ್ದ ದಂಪತಿ ತಮ್ಮನ್ನು ಊರಿಗೆ ಕಳುಹಿಸಿಕೊಡುವಂತೆ ಬುಧವಾರ ಇಲ್ಲಿನ ಅಧಿಕಾರಿಗಳನ್ನ ಕೇಳಿಕೊಂಡಾಗ, ಕಚೇರಿಯಿಂದ ಕಚೇರಿಗೆ ಅಲೆದಾಡಿಸಿದ್ದಾರೆ ಎನ್ನುವ ದೂರು ಕೇಳಿ ಬಂದಿತ್ತು. ಹೀಗಾಗಿ ಇಂದು ಬಿ.ಸಿ. ರೋಡ್ನ ಮಿನಿ ವಿಧಾನಸೌಧಕ್ಕೆ ಆಗಮಿಸಿದ ರಮಾನಾಥ ರೈ, ಇಂದೇ ಬಸ್ ಮೂಲಕ ರಾಜ್ಯದೊಳಗಿನ ಕಾರ್ಮಿಕರನ್ನ ಕಳುಹಿಸಿಕೊಡುವುದಾಗಿ ಹಾಗೂ ಉತ್ತರ ಪ್ರದೇಶದ ಕಾರ್ಮಿಕರಿಗೆ ದಿನಸಿ ಸಾಮಾಗ್ರಿ ನೀಡುವುದಾಗಿ ತಹಶೀಲ್ದಾರ್ ರಶ್ಮಿ ಎಸ್.ಆರ್. ಅವರಿಗೆ ತಿಳಿಸಿದರು.
ಬಳಿಕ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಮಹರಾಷ್ಟ್ರದಲ್ಲಿ ಹಲವು ಮಂದಿ ಕನ್ನಡಿಗರು ಲಾಕ್ಡೌನ್ನಿಂದ ಸಿಲುಕಿಕೊಂಡಿದ್ದು, ಅವರನ್ನು ಊರಿಗೆ ಕರೆ ತರುವಂತೆ ದೂರವಾಣಿಯ ಮೂಲಕ ವಿನಂತಿಸಿಕೊಂಡಿದ್ದೇವೆ. ಅವರ ಆರೋಗ್ಯ ತಪಾಸಣೆ ಮಾಡಿಸಿ, ಸುರಕ್ಷಿತವಾಗಿ ಅವರನ್ನು ಮಹರಾಷ್ಟ್ರದಿಂದ ರಾಜ್ಯಕ್ಕೆ ಕರೆ ತರುವ ವ್ಯವಸ್ಥೆ ಕಲ್ಪಿಸಿಕೊಡುವಂತೆ ಆ ರಾಜ್ಯ ಸರ್ಕಾರವನ್ನ ಆಗ್ರಹಿಸಿದ್ದೇವೆ ಎಂದರು.